ಬೆಂಗಳೂರಿನಲ್ಲಿ ನಡೆದ ವಿಶೇಷ ಅಧಿವೇಶನದಲ್ಲಿ ಮಾತನಾಡಿದರು. ಬಳ್ಳಾರಿ ಮಹಾನಗರ ಪಾಲಿಕೆಯ ಸಹಾಯಕ ಕಂದಾಯ ಅಧಿಕಾರಿ ಎನ್. ವೀರೇಶಕುಮಾರ್, ಪ್ರಥಮ ದರ್ಜೆ ಕಂದಾಯ ನಿರೀಕ್ಷಕ ಮನೋಹರ, ದ್ವಿತೀಯ ದರ್ಜೆ ಸಹಾಯಕ ಕೆ. ದೊಡ್ಡಬಸಪ್ಪ ಸೇರಿ ಮೂವರು 2.80 ಲಕ್ಷ ರೂ. ಪಾಲಿಕೆಯ ಹಣವನ್ನು ದುರುಪಯೋಗ ಮಾಡಿಕೊಂಡಿರುವ ಆರೋಪ ಎದುರಿಸುತ್ತಿದ್ದಾರೆ. ಜತೆಗೆ ಇವರ ವಿರುದ್ಧ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಅಮಾನತುಗೊಳಿಸಿ, ತನಿಖೆ ಪೂರ್ಣಗೊಳ್ಳುವ ಮುನ್ನವೇ ಪುನಃ ಕೆಲಸಕ್ಕೆ ತೆಗೆದುಕೊಂಡಿರುವುದು ಸರಿಯಲ್ಲ. ಇಂತಹವರನ್ನು ಸೇವೆಯಿಂದ ವಜಾ ಮಾಡಬೇಕು. ಮಹಾನಗರ ಪಾಲಿಕೆ ಸೇರಿ ರಾಜ್ಯಾದ್ಯಂತ ಅಧಿಕಾರಿಗಳ ಭ್ರಷ್ಟಾಚಾರ ಹೆಚ್ಚಾಗಿದೆ. ಹಣದ ದುರುಪಯೋಗ ಪ್ರಕರಣಗಳು ದಿನೇದಿನೆ ಹೆಚ್ಚುತ್ತಿವೆ ಎಂದರು.