ಬಾಕ್ಸ್ : ಮಾ.18ರಿಂದ ಆರಂಭಗೊಳ್ಳಲಿದ್ದು ಜಿಲ್ಲೆಯ ಒಟ್ಟು 65 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಬಳ್ಳಾರಿ ಪೂರ್ವ 15, ಕುರುಗೋಡು 25, ಸಂಡೂರು 11, ಸಿರಗುಪ್ಪ 14 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಕುಡಿವ ನೀರು, ಆಸನ ವ್ಯವಸ್ಥೆ, ಸಿಸಿ ಕ್ಯಾಮೆರಾ, ವೆಬ್ ಪ್ರಕ್ರಿಯೆ, ಇಂಟರನೆಟ್ ವ್ಯವಸ್ಥೆ ಕೈಗೊಳ್ಳಲಾಗಿದೆ. 65 ಸ್ಥಾನಿಕ ಜಾಗೃತ ದಳದ ಅಧಿಕಾರಿಗಳ ನೇಮಕ ಮಾಡಲಾಗಿದೆ. ವಿದ್ಯಾರ್ಥಿಗಳು ಸುಸೂತ್ರವಾಗಿ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲು ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯಲ್ಲಿ 23,282 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 19,733 ರೆಗ್ಯುಲರ್ ವಿದ್ಯಾರ್ಥಿಗಳು , 1328 ಪುನರಾವರ್ತಿತ, 2009 ಖಾಸಗಿ ಪುನರಾವರ್ತಿತ ಹಾಗೂ 212 ಖಾಸಗಿ ರೆಗ್ಯುಲರ್ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯ ಪ್ರೌಢಶಾಲೆಗಳಲ್ಲಿ 487 ಶಿಕ್ಷಕರ ಹುದ್ದೆಗಳು ಖಾಲಿ ಇರುವುದು ದೊಡ್ಡ ಸವಾಲಾಗಿತ್ತು. ಆದರೆ, ಇಲಾಖೆಯು ಇದನ್ನು ಮೆಟ್ಟಿನಿಲ್ಲಲು ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡು ಯಾವುದೇ ಪಾಠ ಬಾಕಿ ಉಳಿಯದಂತೆ ಕ್ರಮ ವಹಿಸಿದೆ. ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ ಇಡೀ ಜಿಲ್ಲಾ ಶಿಕ್ಷಣ ಇಲಾಖೆ ಕಾರ್ಯಪ್ರವೃತ್ತರಾಗಿದ್ದು, ಈ ಬಾರಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಜಿಲ್ಲೆ ಹೊಸ ಮೈಲಿಗಲ್ಲು ಸ್ಥಾಪಿಸುವ ಲಕ್ಷಣಗಳು ಗೋಚರಿಸುತ್ತಿವೆ.