ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲ

ಕೂಡ್ಲಿಗಿ ತಾಲೂಕಿನ ಶಿವಪುರ ಬಳಿ 36 ಕೋಟಿ ರೂ. ವೆಚ್ಚದ ಶ್ರಮಿಕರ ವಸತಿ ಶಾಲೆ ನಿರ್ಮಾಣಕ್ಕೆ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಭೂಮಿ ಪೂಜೆ ನೆರವೇರಿಸಿದರು. ತಹಸೀಲ್ದಾರ್ ವಿ.ಕೆ.ನೇತ್ರಾವತಿ, ತಾಪಂ ಇಒ ನರಸಪ್ಪ, ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಕಾವಲ್ಲಿ ಶಿವಪ್ಪ ನಾಯಕ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ವೆಂಕಟೇಶ್, ಎಪಿಎಂಸಿ ಅಧ್ಯಕ್ಷ ಕುರಿಹಟ್ಟಿ ಬೋಸಯ್ಯ, ಕಾರ್ಯದರ್ಶಿ ಬಸವರಾಜ್, ನಿವೃತ್ತ ನೌಕರರ ಸಂಘದ ಅಧ್ಯಕ್ಷ ತಳವಾರ ಶರಣಪ್ಪ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಅನಿಸಿಕೆ
  • ಶ್ರಮಿಕರ ವಸತಿ ಶಾಲೆ ನಿರ್ಮಾಣಕ್ಕೆ ಭೂಮಿ ಪೂಜೆ

ಕೂಡ್ಲಿಗಿ: ಕಾರ್ಮಿಕರ ಮಕ್ಕಳಿಗೆ ಶಿಕ್ಷಣದ ಬೆಳಕಿನಲ್ಲಿ ಭವಿಷ್ಯ ಅರಳಿಸುವ ಮಹತ್ವಾಕಾಂಕ್ಷೆಯ ಯೋಜನೆ ಶ್ರಮಿಕರ ವಸತಿ ಶಾಲೆ ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಹೇಳಿದರು.

ಶಿವಪುರ ಗ್ರಾಮದ ಬಳಿ ಬುಧವಾರ 36 ಕೋಟಿ ರೂ. ವೆಚ್ಚದ ಶ್ರಮಿಕರ ವಸತಿ ಶಾಲೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ವಸತಿ ಶಾಲೆ ಕೇವಲ ಕಟ್ಟಡವಾಗಿರದೇ ಸಾವಿರಾರು ಶ್ರಮಿಕರ ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಣದ ದೇವಾಲಯವಾಗಲಿದ್ದು, ಗುಣಮಟ್ಟದ ಶಿಕ್ಷಣ, ಸುರಕ್ಷಿತ ವಸತಿಯೊಂದಿಗೆ ಉಜ್ವಲ ಭವಿಷ್ಯದ ಹೊಸದಾರಿ ತೆರೆಯಲಿದೆ.
ತಾಲೂಕಿನ ಅನೇಕ ವಸತಿ ಶಾಲೆಗಳಿದ್ದು, ಬೇಡಿಕೆ ಹೆಚ್ಚಿದೆ. ಇದರಿಂದ ಪ್ರತಿ ವಸತಿ ಶಾಲೆಯಲ್ಲಿ 10 ವಿದ್ಯಾರ್ಥಿಗಳಿಗೆ ಹೆಚ್ಚುವರಿಯಾಗಿ ಪ್ರವೇಶ ಕಲ್ಪಿಸಲಾಗಿದೆ. ಇದರಿಂದ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗಿದೆ. ಕಟ್ಟಡ ಕಾಮಗಾರಿ ಗುಣಮಟ್ಟದಲ್ಲಿರಬೇಕು ಎಂದು ಸೂಚಿಸಿದರು.
ತಹಸೀಲ್ದಾರ್ ವಿ.ಕೆ.ನೇತ್ರಾವತಿ, ತಾಪಂ ಇಒ ನರಸಪ್ಪ, ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಕಾವಲಿ ಶಿವಪ್ಪ ನಾಯಕ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಸ್.ವೆಂಕಟೇಶ್, ಎಪಿಎಂಸಿ ಅಧ್ಯಕ್ಷ ಕುರಿಹಟ್ಟಿ ಬೋಸಯ್ಯ, ಕಾರ್ಯದರ್ಶಿ ಬಸವರಾಜ್, ನಿವೃತ್ತ ನೌಕರರ ಸಂಘದ ಅಧ್ಯಕ್ಷ ತಳವಾರ ಶರಣಪ್ಪ, ಪೌರಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಪ್ರಭಾಕರ್, ಗ್ಯಾರಂಟಿ ಸಮಿತಿ ಅಧ್ಯಕ್ಷ ಜಿಲಾನ್, ಪ್ರಮುಖರಾದ ಹಿರೇಕುಂಬಳಗುಂಟೆ ಉಮೇಶ್, ಕೋಗಳಿ ಮಂಜುನಾಥ, ಎರ‌್ರಿಸ್ವಾಮಿ, ರಾಜಶೇಖರ್, ಟಿ.ಜಿ.ನಾಗರಾಜಗೌಡ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net