ಈ ಖಾತೆಯ ಮೂಲಕ ಸಾರ್ವಜನಿಕರಿಗೆ ಹಾಗೂ ಇಲಾಖೆಯ ಅಧಿಕಾರಿಗಳಿಗೆ ವಾಟ್ಸ್‌ಪ್ ಮೂಲಕ ಸಂದೇಶ ರವಾನಿಸಿ, ಹಣ ಕಬಳಿಸಲು ಅಥವಾ ದುರುದ್ದೇಶಪೂರಿತ ಚಟುವಟಿಕೆಗಳಿಗೆ ಕಿಡಿಗೇಡಿಗಳು ಸಂಚು ರೂಪಿಸಿದ್ದಾರೆ ಎನ್ನಲಾಗಿದೆ. ಈ ಕುರಿತು ಮಾಹಿತಿ ತಿಳಿದ ಕೂಡಲೇ ಎಚ್ಚೆತ್ತಿರುವ ಪಾಲಿಕೆ ಆಯುಕ್ತ ಪಿ.ಎಸ್. ಮಂಜುನಾಥ ಅವರು ಕಿಡಿಗೇಡಿಗಳು ನನ್ನ ಭಾವಚಿತ್ರ ಬಳಸಿ ನಕಲಿ ವಾಟ್ಸಾಪ್ ಖಾತೆ ಸೃಷ್ಟಿಸಿದ್ದಾರೆ. ಅದು ನನ್ನ ಅಧಿಕೃತ ಮೊಬೈಲ್ ಸಂಖ್ಯೆಯಲ್ಲ. ಈ ನಕಲಿ ಸಂಖ್ಯೆಯಿಂದ ಬರುವ ಯಾವುದೇ ಸಂದೇಶಗಳಿಗೆ ಸಾರ್ವಜನಿಕರು ಹಾಗೂ ಪಾಲಿಕೆ ಸಿಬ್ಬಂದಿ ಸ್ಪಂದಿಸಬಾರದು. ಮುಖ್ಯವಾಗಿ ಹಣದ ಬೇಡಿಕೆ ಅಥವಾ ಇನ್ಯಾವುದೇ ವೈಯಕ್ತಿಕ ಮಾಹಿತಿ ಕೇಳಿದರೆ ಯಾವುದೇ ಕಾರಣಕ್ಕೂ ನೀಡಬಾರದು ಎಂಬುದಾಗಿ ಮನವಿ ಮಾಡಿದ್ದಾರೆ. ಈ ನಕಲಿ ಖಾತೆ ಸೃಷ್ಟಿಸಿರುವ ಕಿಡಿಗೇಡಿಗಳ ವಿರುದ್ಧ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪಾಲಿಕೆ ಮೂಲಗಳು ತಿಳಿಸಿದವು.