ಬಳ್ಳಾರಿ : ಪಹಣಿ ಹೊಂದಿರುವ ಪ್ರತಿಯೊಬ್ಬ ರೈತರು ಬೆಳೆ ವಿಮೆ ಅರ್ಹರಾಗಿದ್ದು, ಸದುಪಯೋಗಪಡಿಸಿಕೊಳ್ಳಬೇಕು ಎಂದು ಉಪ ಕೃಷಿ ನಿರ್ದೇಶಕ ಎಸ್.ಎನ್.ಮಂಜುನಾಥ ಹೇಳಿದರು. ತಾಲೂಕಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ತಾಲೂಕು ಆಡಳಿತ, ಕೃಷಿ ಇಲಾಖೆ ಸಹಯೋಗದೊಂದಿಗೆ ಪಿಎಂಎಫ್‌ಬಿವೈ ಬೆಳೆ ವಿಮೆ, ಪರ್ಯಾಯ ಬೆಳೆ ಪದ್ಧತಿ ಹಾಗೂ ಬರಗಾಲ ನಿರ್ವಹಣಾ ಕ್ರಮಗಳು ಕುರಿತು ಆಯೋಜಿಸಿದ್ದ ರೈತರಿಗೆ ಅರಿವು ಮೂಡಿಸುವ ವಿಶೇಷ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸದ್ಯದಲ್ಲಿ ಪರಿಸ್ಥಿತಿಯಲ್ಲಿ ರೈತರು ಬಿತ್ತನೆಗೆ ಮುಂಚಿತವಾಗಿಯೇ ವಿಮೆ ಮಾಡಿಸುವುದು ಸೂಕ್ತ. ಜಿಲ್ಲೆಯ ಭಾಗದ ರೈತರು ಹತ್ತಿ, ಮೆಕ್ಕೆಜೋಳ, ಸಜ್ಜೆ ಹಾಗೂ ಬರ ನಿರೋಧಕ ಬೆಳೆಯಾದ ನವಣೆ ಮತ್ತು ಸಾಮೆಗೆ ಕಡ್ಡಾಯವಾಗಿ ವಿಮೆ ಮಾಡಿಸಬೇಕೆಂದು ಕರೆ ನೀಡಿದರು.