ಸಾವಯುವ ಕೃಷಿಯತ್ತ ಗಮನಹರಿಸಿ

ಮೋಕಾ ಗ್ರಾಮದ ಕುಂಟು ಮಾರಮ್ಮ ದೇವಸ್ಥಾನ ಆವರಣದಲ್ಲಿ  ರೈತರೊಂದಿಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಉಪ ಕೃಷಿ ನಿರ್ದೇಶಕ ಮಂಜುನಾಥ, ಆತ್ಮ ಯೋಜನೆಯ ಉಪ ಯೋಜನಾ ನಿರ್ದೇಶಕಿ ಕವಿತಾ, ವಿಜ್ಞಾನಿ ಡಾ.ಪಾಲಯ್ಯ, ರೈತರಾದ ಹನುಮಂತಪ್ಪ, ಮಹಾದೇವ, ಅಂಬರೀಶ್ ಇತರರಿದ್ದರು.
ಮೋಕಾ ಗ್ರಾಮದ ಕುಂಟು ಮಾರಮ್ಮ ದೇವಸ್ಥಾನ ಆವರಣದಲ್ಲಿ ರೈತರೊಂದಿಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಉಪ ಕೃಷಿ ನಿರ್ದೇಶಕ ಮಂಜುನಾಥ, ಆತ್ಮ ಯೋಜನೆಯ ಉಪ ಯೋಜನಾ ನಿರ್ದೇಶಕಿ ಕವಿತಾ, ವಿಜ್ಞಾನಿ ಡಾ.ಪಾಲಯ್ಯ, ರೈತರಾದ ಹನುಮಂತಪ್ಪ, ಮಹಾದೇವ, ಅಂಬರೀಶ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕೃಷಿ ಪದ್ಧತಿ ಉಳಿಸುವುದು ಇಂದಿನ ತುರ್ತು ಅಗತ್ಯ
  • ಮಣ್ಣಿನ ಪರೀಕ್ಷಾ ವರದಿಗೆ ಅನುಗುಣ
ಬಳ್ಳಾರಿ : ರಾಸಾಯನಿಕ ಗೊಬ್ಬರ ಹಾಗೂ ಕೀಟನಾಶಕಗಳ ಅತಿಯಾದ ಬಳಕೆಯಿಂದಾಗಿ ಭೂಮಿಯೂ ತನ್ನ ನೈಸರ್ಗಿಕ ಶಕ್ತಿ ಕಳೆದುಕೊಳ್ಳುತ್ತಿದೆ ಎಂದು ಉಪ ಕೃಷಿ ನಿರ್ದೇಶಕ ಮಂಜುನಾಥ ಕಳವಳ ವ್ಯಕ್ತಪಡಿಸಿದರು.
ತಾಲೂಕಿನ ಮೋಕಾ ಗ್ರಾಮದಲ್ಲಿ ಕೃಷಿ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರ ಸಹಯೋಗದಲ್ಲಿ ಭೂಮಿಯ ಫಲವತ್ತತೆ ಕಾಯ್ದುಕೊಳ್ಳುವಿಕೆ, ಮಣ್ಣಿನ ಆರೋಗ್ಯ ಸಂರಕ್ಷಣೆ ಹಾಗೂ ಸುಸ್ಥಿರ ಕೃಷಿ ಪದ್ಧತಿಗಳ ಕುರಿತು ರೈತರಲ್ಲಿ ವ್ಯಾಪಕ ಅರಿವು ಮೂಡಿಸಲು ಆತ್ಮ ಯೋಜನೆಯಡಿ ಮಂಗಳವಾರ ಆಯೋಜಿಸಿದ್ದ ಧರ್ತಿ ಮಾತಾ ಬಚಾವೋ, ಖೇತಿ ಬಚಾವೋ ಆಂದೋಲನ ಮತ್ತು ರೈತರ ಜಾಗೃತಿ ಸಭೆಯಲ್ಲಿ ಮಾತನಾಡಿದರು. ಭೂಮಿ ಮತ್ತು ಕೃಷಿ ಪದ್ಧತಿ ಉಳಿಸುವುದು ಇಂದಿನ ತುರ್ತು ಅಗತ್ಯವಾಗಿದ್ದು, ಮುಂದಿನ ಪೀಳಿಗೆಗೆ ಫಲವತ್ತಾದ ಭೂಮಿಯನ್ನು ಉಡುಗೊರೆಯಾಗಿ ನೀಡಲು ರೈತರು ಸಾವಯವ ಮತ್ತು ನೈಸರ್ಗಿಕ ಕೃಷಿಯತ್ತ ಮುಖ ಮಾಡಬೇಕು ಎಂದು ಸಲಹೆ ನೀಡಿದರು.
ಸಹಾಯಕ ಕೃಷಿ ನಿರ್ದೇಶಕ ಗರ್ಜಪ್ಪ ಮಾತನಾಡಿ, ರೈತರು ಕೇವಲ ಯೂರಿಯಾ ಅಥವಾ ಡಿಎಪಿ ಗೊಬ್ಬರಗಳನ್ನೇ ಅತಿಯಾಗಿ ಬಳಸುವುದನ್ನು ನಿಲ್ಲಿಸಬೇಕು. ಬೆಳೆಗಳಿಗೆ ಸಾರಜನಕ, ರಂಜಕ ಮತ್ತು ಪೊಟ್ಯಾಶ್ ಜತೆಗೆ ಲಘು ಪೋಷಕಾಂಶಗಳೂ ಅತ್ಯಗತ್ಯವಾಗಿದ್ದು, ಮಣ್ಣಿನ ಪರೀಕ್ಷಾ ವರದಿಗೆ ಅನುಗುಣವಾಗಿ ಸಮತೋಲನ ಪ್ರಮಾಣದಲ್ಲಿ ರಸಗೊಬ್ಬರ ಬಳಸುವುದರಿಂದ ಅನಗತ್ಯ ವೆಚ್ಚ ಕಡಿಮೆಯಾಗಿ, ಇಳುವರಿ ಹೆಚ್ಚುತ್ತದೆ ಎಂದರು.
ಹಗರಿಯ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ಡಾ.ಪಾಲಯ್ಯ ಮಾತನಾಡಿ, ಪರಿಸರಕ್ಕೆ ಹಾನಿ ಮಾಡದಂತೆ ದೀರ್ಘಾವಧಿಯಲ್ಲಿ ಲಾಭ ತಂದುಕೊಡುವ ಕೃಷಿಯೇ ಸುಸ್ಥಿರ ಕೃಷಿ. ಇದಕ್ಕಾಗಿ ಬೆಳೆ ಪರಿವರ್ತನೆ, ಅಂತರ್ ಬೆಳೆ ಪದ್ಧತಿ, ಹಸಿರುಗೊಬ್ಬರಗಳ ಬಳಕೆ ಮತ್ತು ಸಮಗ್ರ ಕೀಟ ನಿರ್ವಹಣಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
===
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net