ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ

ಸಿರಿಗೇರಿಯಲ್ಲಿ ಪೊಲೀಸ್ ಇಲಾಖೆಯಿಂದ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ ನಡೆಯಿತು.
ಸಿರಿಗೇರಿಯಲ್ಲಿ ಪೊಲೀಸ್ ಇಲಾಖೆಯಿಂದ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ ನಡೆಯಿತು.
Published on
ಸಿರಿಗೇರಿ: ವಾಹನ ಚಾಲಕರು ಚಾಲನಾ ಪರವಾನಗಿ, ಜೀವವಿಮೆ ಮುಂತಾದ ದಾಖಲೆಗಳನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ಪಿಎಸ್‌ಐ ವೈ.ಶಶಿಧರ ನಾಯಕ ಹೇಳಿದರು.
ಗ್ರಾಮದಲ್ಲಿ ಪೊಲೀಸ್ ಠಾಣೆಯಿಂದ ಆಯೋಜಿಸಿದ್ದ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಬೈಕ್ ಸವಾರರು ಹೆಲ್ಮೆಟ್ ಧರಿಸುವುದರೊಂದಿಗೆ ರಸ್ತೆ ಸುರಕ್ಷತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಅಪ್ರಾಪ್ತರಿಗೆ ವಾಹನ ಚಲಾಯಿಸಲು ಕೊಡಬಾರದು. ಮದ್ಯ ಸೇವನೆ ಮಾಡಿ, ರಸ್ತೆ ನಿಯಮಗಳನ್ನು ಉಲ್ಲಂಘಿಸಿ ವಾಹನ ಚಲಾಯಿಸಬಾರದು. ಕಾನೂನು ಬಾಹಿರ ಚಟುವಟಿಕೆಗಳಿಗೆ ವಾಹನಗಳನ್ನು ಬಳಸಿದರೆ ಕ್ರಮ ವಹಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net