ಫೋಕ್ಸೋ ಸಂತ್ರಸ್ತೆ ಹೆಸರು ಪ್ರಸ್ತಾಪ

 ಬಿ.ಶ್ರೀರಾಮುಲು
ಬಿ.ಶ್ರೀರಾಮುಲು
Published on

ಪ್ರಮುಖ ಮುಖ್ಯಾಂಶಗಳು

  • ಸಾರ್ವಜನಿಕ
ಬಳ್ಳಾರಿ : ನಗರದಲ್ಲಿ ನಡೆದ ಬಿಜೆಪಿ ಸಮಾವೇಶದ ವೇಳೆ ಪೋಕ್ಸೋ ಪ್ರಕರಣದ ಸಂತ್ರಸ್ತೆಯ ಗುರುತನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ ಆರೋಪದಡಿ ಮಾಜಿ ಸಚಿವ ಬಿ.ಶ್ರೀರಾಮುಲು ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಸಮಾವೇಶದ ಭಾಷಣದಲ್ಲಿ ಬಿ.ಶ್ರೀರಾಮುಲು ಅವರು ಜಿಲ್ಲೆಯಲ್ಲಿ ಅಕ್ರಮ ಗಾಂಜಾ ಹಾಗೂ ಡ್ರಗ್ಸ್ ಹಬ್ ಎಂಬುದಾಗಿ ಆರೋಪಿಸಿದ್ದರು. ಇದೇ ವೇಳೆ ಡ್ರಗ್ಸ್ ಸೇವನೆಯ ಹಿನ್ನೆಲೆಯಲ್ಲಿ ಶಾಲಾ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆದಿದೆ ಎಂಬ ಹೇಳಿಕೆ ನೀಡಿದ್ದರು. ಈ ಸಂದರ್ಭದಲ್ಲೇ ಶ್ರೀರಾಮುಲು ಸಂತ್ರಸ್ತೆಯ ಸಂವೇದನಶೀಲ ವಿವರ ಸಾರ್ವಜನಿಕವಾಗಿ ಉಲ್ಲೇಖಿಸಿರುವುದು ವ್ಯಾಪಕ ಟೀಕೆಗೆ ಕಾರಣವಾಗಿದೆ. ಪೋಕ್ಸೋ ಸಂತ್ರಸ್ತೆಯ ಹೆಸರು, ವಿಳಾಸ, ಓದುತ್ತಿರುವ ತರಗತಿ ಹಾಗೂ ಶಾಲೆಯ ಹೆಸರನ್ನು ಉಲ್ಲೇಖಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಭಾಷಣದ ವಿಡಿಯೋ ದೃಶ್ಯಾವಳಿ, ಸಾಕ್ಷ್ಯಾಧಾರ ಹಾಗೂ ಸಾಕ್ಷಿಗಳ ಹೇಳಿಕೆಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿದವು.
===
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net