ಮಾದಕ ದ್ರವ್ಯದಿಂದ ಮುಕ್ತರಾಗಿ

ಬಳ್ಳಾರಿಯ ಬಿಮ್ಸ್ ಮೈದಾನದಲ್ಲಿ ಆಯೋಜಿಸಿದ್ದ ವಾಕ್‌ಥಾನ್‌ಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಬಲೂನ್ ಹಾರಿಸುವ ಮೂಲಕ ಚಾಲನೆ ನೀಡಿದರು. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಕುಲಪತಿ ಡಾ.ಬಿ.ಸಿ.ಭಗವಾನ್, ದಿಶಾಬೋಧ್ ಫೌಂಡೇಷನ್ ನಿರ್ದೇಶಕ ಶಿವರಾಜ್‌ರೆಡ್ಡಿ, ಮೇಯರ್ ಪಿ.ಗಾದೆಪ್ಪ, ಶ್ರೀಕಲ್ಯಾಣಸ್ವಾಮಿ ಸಂಸ್ಥಾನ ಮಠದ ಕಲ್ಯಾಣ ಸ್ವಾಮೀಜಿ ಇತರರಿದ್ದರು.
ಬಳ್ಳಾರಿಯ ಬಿಮ್ಸ್ ಮೈದಾನದಲ್ಲಿ ಆಯೋಜಿಸಿದ್ದ ವಾಕ್‌ಥಾನ್‌ಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಬಲೂನ್ ಹಾರಿಸುವ ಮೂಲಕ ಚಾಲನೆ ನೀಡಿದರು. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಕುಲಪತಿ ಡಾ.ಬಿ.ಸಿ.ಭಗವಾನ್, ದಿಶಾಬೋಧ್ ಫೌಂಡೇಷನ್ ನಿರ್ದೇಶಕ ಶಿವರಾಜ್‌ರೆಡ್ಡಿ, ಮೇಯರ್ ಪಿ.ಗಾದೆಪ್ಪ, ಶ್ರೀಕಲ್ಯಾಣಸ್ವಾಮಿ ಸಂಸ್ಥಾನ ಮಠದ ಕಲ್ಯಾಣ ಸ್ವಾಮೀಜಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಯುವಜನತೆ
ಬಳ್ಳಾರಿ : ಯುವಜನತೆ ಶಕ್ತಿಯು ದೇಶವನ್ನು ವಿಕಸಿತ ಭಾರತದ ಕೊಂಡೊಯ್ಯಲು ಸಹಕಾರಿಯಾಗಬೇಕು. ಯುವಪೀಳಿಗೆ ಮಾದಕ ದ್ರವ್ಯಗಳಿಂದ ಮುಕ್ತವಾಗಬೇಕು ಎಂದು ರಾಜ್ಯಪಾಲ ಥಾವರಚಂದ್ ಗೆಹಲೋತ್ ಹೇಳಿದರು.
ಇಲ್ಲಿನ ಬಿಮ್ಸ್ ಮೈದಾನದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ದಿಶಾಬೋಧ್ ಫೌಂಡೇಷನ್ ಮತ್ತು ನಾರ್ಕೋಟಿಕ್ಸ್ ಬ್ಯೂರೋ ಸಹಯೋಗದೊಂದಿಗೆ ಬುಧವಾರ ಆಯೋಜಿಸಿದ್ದ ನಶಾ ಮುಕ್ತ ಭಾರತ, ಯುವ ಶುದ್ಧಿ ಅಭಿಯಾನ ವಾಕಥಾನ್‌ಗೆ ಚಾಲನೆ ನೀಡಿ ಮಾತನಾಡಿದರು. ಯುವ ಶುದ್ಧಿ ಅಭಿಯಾನವು ದೇಶಾದ್ಯಂತ ಬದಲಾವಣೆಯ ಅಲೆ ಸೃಷ್ಟಿಸಲಿ. ಮಾದಕ ವ್ಯಸನವು ಕೇವಲ ವ್ಯಕ್ತಿಯ ಸಮಸ್ಯೆಯಲ್ಲ. ಕುಟುಂಬಗಳನ್ನು ವಿಘಟಿಸಿ ಸಮಾಜದಲ್ಲಿ ಅಶಾಂತಿ ಮತ್ತು ಅಪರಾಧಗಳನ್ನು ಹೆಚ್ಚಿಸುವ ರಾಷ್ಟ್ರೀಯ ಸವಾಲಾಗಿದೆ. ಸದೃಢ ಭಾರತ ನಿರ್ಮಾಣಕ್ಕಾಗಿ ಯುವಶಕ್ತಿಯು ವ್ಯಸನ ಮುಕ್ತ ಇಂದಿನ ಅತ್ಯಗತ್ಯ ಎಂದರು,
ಕರ್ನಾಟಕದ ಪುಣ್ಯ ಭೂಮಿಯು ಶ್ರೀಮಂತ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಪರಂಪರೆ ಹೊಂದಿದೆ. ಬಸವಣ್ಣನವರಂತಹ ಮಹಾನ್ ಸಂತರ ಬೋಧನೆಗಳು ನಮಗೆ ಸದಾ ಸಂಯಮ ಮತ್ತು ಸದಾಚಾರದ ಹಾದಿ ತೋರಿಸಿವೆ. ಇಂತಹ ಪವಿತ್ರ ಮಣ್ಣಿನಲ್ಲಿ ಮಾದಕದ್ರವ್ಯಗಳ ಹಾವಳಿ ಹೆಚ್ಚುತ್ತಿರುವುದು ಆತಂಕಕಾರಿ ವಿಷಯವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿ ಡಾ.ಬಿ.ಸಿ.ಭಗವಾನ್ ಮಾತನಾಡಿ, ಯುವಜನತೆ ಮಾದಕ ವ್ಯಸನದಂತಹ ಕೆಟ್ಟ ಹವ್ಯಾಸಗಳಿಗೆ ಬಲಿಯಾಗದೆ, ಆರೋಗ್ಯವಂತ ಮತ್ತು ಸದೃಢ ಭಾರತದ ನಿರ್ಮಾಣಕ್ಕೆ ಕೈಜೋಡಿಸಬೇಕು. ನಮ್ಮ ದೇಶದ ಅತಿ ದೊಡ್ಡ ಶಕ್ತಿ ಯುವಸಂಪತ್ತು. ಆದರೆ ಇಂದು ಮಾದಕ ದ್ರವ್ಯಗಳ ಜಾಲವು ಈ ಶಕ್ತಿಯನ್ನು ಕುಂದಿಸುತ್ತಿದೆ. ಸಣ್ಣ ವಯಸ್ಸಿನಲ್ಲೇ ಹೃದಯಾಘಾತ ಮತ್ತು ಮೆದುಳು ಸಂಬಂಧಿ ಕಾಯಿಲೆಗಳಿಗೆ ಮಾದಕ ವ್ಯಸನವೇ ಪ್ರಮುಖ ಕಾರಣವಾಗುತ್ತಿದೆ. ಇದನ್ನು ತಡೆಗಟ್ಟಲು ವಿಶ್ವವಿದ್ಯಾಲಯವು ರಾಜ್ಯಾದ್ಯಂತ ಅಭಿಯಾನ ಹಮ್ಮಿಕೊಂಡಿದೆ ಎಂದರು.
ಬಳಿಕ ವಿದ್ಯಾರ್ಥಿಗಳಿಗೆ ‘ಮಾದಕ ದ್ರವ್ಯ ಮುಕ್ತ ಭಾರತ’ಕ್ಕಾಗಿ ಪ್ರತಿಜ್ಞಾ ವಿಧಿ ಬೋಧಿಸಿದರು. ನಗರದ ಬಿಮ್ಸ್ ಮೈದಾನದ ಆವರಣದಿಂದ ಆರಂಭವಾದ ಅಭಿಯಾನದ ವಾಕಥಾನ್ ಜಾಗೃತಿ ಜಾಥವು ಸುಧಾ ಸರ್ಕಲ್, ಇನ್‌ಫ್ಯಾಂಟರಿ, ಕನಕದಾಸ ವೃತ್ತ, ಎಸ್ಪಿ ವೃತ್ತ, ದುರ್ಗಮ್ಮ ಗುಡಿ ಮಾರ್ಗವಾಗಿ ಕಪ್ಪಗಲ್ಲು ರಸ್ತೆಯಿಂದ ಕಿತ್ತೂರುರಾಣಿ ಚೆನ್ನಮ್ಮ ಪ್ರೌಢಶಾಲೆ ಆವರಣಕ್ಕೆ ತಲುಪಿ ಸಂಪನ್ನಗೊಂಡಿತು.
ಬಾಕ್ಸ್ : ಅಭಿಯಾನದ ಅಂಗವಾಗಿ ಆಯೋಜಿಸಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ವೇದಿಕೆ ಮೇಲೆ ಕೂರಲು ಯತ್ನಿಸಿದರು. ಶಿಷ್ಠಾಚಾರ ಪಾಲನೆ ಹಿನ್ನೆಲೆ ಕೆಳಗೆ ಇಳಿಸುವಂತೆ ಎಡಿಸಿ ಮಹಮ್ಮದ್ ಎನ್.ಜುಬೇರ್ ಅವರು ಪೊಲೀಸರಿಗೆ ಸೂಚಿಸಿದರು. ಇದೇ ವೇಳೆ ಚಿದಾನಂದಪ್ಪ ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ, ತಳ್ಳಾಟದಲ್ಲಿ ಪೊಲೀಸ್ ಪೇದೆಯೊಬ್ಬರು ವೇದಿಕೆಯಿಂದ ಕಳೆಗಡೆ ಬಿದ್ದರು. ಅಂತಿಮವಾಗಿ ಚಿದಾನಂದಪ್ಪ ಅವರನ್ನು ವೇದಿಕೆಯಿಂದ ಕೆಳಗೆ ಇಳಿಸಿದ್ದರಿಂದ ಕೋಪಗೊಂಡ ವೇದಿಕೆಯಿಂದ ಹೊರ ನಡೆದರು.
==
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net