ಗರ್ಭಕಂಠದ ಕ್ಯಾನ್ಸರ್ ಲಸಿಕೆ ಪಡೆಯಿರಿ

ಕಂಪ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ 14 ವರ್ಷ ವಯಸ್ಸಿನ ಹೆಣ್ಣುಮಕ್ಕಳಿಗೆ ಎಚ್‌ಪಿವಿ ಲಸಿಕೆ ಹಾಕಲಾಯಿತು.
ಕಂಪ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ 14 ವರ್ಷ ವಯಸ್ಸಿನ ಹೆಣ್ಣುಮಕ್ಕಳಿಗೆ ಎಚ್‌ಪಿವಿ ಲಸಿಕೆ ಹಾಕಲಾಯಿತು.
Published on
ಕಂಪ್ಲಿ: ಗರ್ಭಕಂಠದ ಕ್ಯಾನ್ಸರ್ ಬಾರದಿರಲು 14 ವರ್ಷ ವಯಸ್ಸಿನ ಹೆಣ್ಣುಮಕ್ಕಳು ಎಚ್‌ಪಿವಿ ಲಸಿಕೆ ಹಾಕಿಸಿಕೊಳ್ಳಲು ಮುಂದಾಗಬೇಕೆಂದು ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ರವೀಂದ್ರ ಕನಕೇರಿ ಹೇಳಿದರು.
ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಎಚ್‌ಪಿವಿ ಲಸಿಕಾ ಮಾಸಿಕ ಅಭಿಯಾನದಲ್ಲಿ ಬುಧವಾರ ಮಾತನಾಡಿದರು. ಎಚ್‌ಪಿವಿ ಲಸಿಕೆ ಕುರಿತು ನಿರ್ಲಕ್ಷೃ ತೋರಬಾರದು. 14 ವರ್ಷ ವಯಸ್ಸಿನ ಪ್ರತಿಯೊಬ್ಬ ಹೆಣ್ಣುಮಕ್ಕಳು ಲಸಿಕೆ ಪಡೆದುಕೊಳ್ಳಬೇಕು. ಇದರಿಂದ ಗರ್ಭಕಂಠದ ಕ್ಯಾನ್ಸರ್‌ನಿಂದ ದೂರವಿರಬಹುದು ಎಂದರು. ಪುರಸಭೆ ಮಾಜಿ ಸದಸ್ಯೆ ಜಿ.ಗುಡುದಮ್ಮ ಅಭಿಯಾನಕ್ಕೆ ಚಾಲನೆ ನೀಡಿದರು.
ಡಾ.ಭರತ್, ಡಾ.ಹಾರಿಕಾ, ಡಾ.ಶ್ರೀನಿವಾಸ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕೆ.ಶೋಭಾ, ಹಿರಿಯ ನಿರೀಕ್ಷಕರಾದ ಪಿ.ಬಸವರಾಜ, ಚನ್ನಬಸವರಾಜ, ಆರೋಗ್ಯ ನಿರೀಕ್ಷಣಾಧಿಕಾರಿ ಪ್ರಕಾಶಬಾಬು, ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿಗಳು, ಶುಶ್ರೂಷಣ ಅಧಿಕಾರಿಗಳು, ಸಿಬ್ಬಂದಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net