ಬಳ್ಳಾರಿ : ಪೋಲಿಯೊ ಲಸಿಕೆಯೂ ಮಕ್ಕಳಿಗೆ ಯಾವುದೇ ಅಡ್ಡಪರಿಣಾಮ ಬೀರದೆ, ಅವರಲ್ಲಿ ರೋಗನಿರೋಧಕ ಶಕ್ತಿ ಮತ್ತಷ್ಟು ಹೆಚ್ಚಾಗಲಿದೆ ಎಂದು ಮಹಾನಗರ ಪಾಲಿಕೆ ಮೇಯರ್ ಪಿ.ಗಾದೆಪ್ಪ ಹೇಳಿದರು. ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಸ್ಪತ್ರೆ ಸಹಯೋಗದೊಂದಿಗೆ ಆಯೋಜಿಸಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.