ಅಂಗವಿಕಲರಿಗೆ ಆತ್ಮವಿಶ್ವಾಸ ತುಂಬಿ

ಬಳ್ಳಾರಿಯ  ಮುನ್ಸಿಪಲ್ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಸಿಎಸ್‌ಆರ್ ನಿಧಿಯಡಿ ಜಿಲ್ಲೆಯ ಅಂಗವಿಕಲರಿಗೆ ಮೋಟಾರ್ ಚಾಲಿತ ತ್ರಿಚಕ್ರ ವಾಹನಗಳ ವಿತರಣೆ ಕಾರ್ಯಕ್ರಮವನ್ನು ಶಾಸಕಿ ಅನ್ನಪೂರ್ಣ ತುಕಾರಾಮ್ ಉದ್ಘಾಟಿಸಿದರು. ಡಿಸಿ ನಾಗೇಂದ್ರ ಪ್ರಸಾದ್ ಕೆ., ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್, ಮೇಯರ್ ಪಿ.ಗಾದೆಪ್ಪ,  ಎಎಸ್ಪಿ ನವೀನ್ ಕುಮಾರ್,  ಸಹಾಯಕ ಕಾರ್ಮಿಕ ಆಯುಕ್ತ ಡಾ.ಅವಿನಾಶ ನಾಯ್ಕ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಕುಟುಂಬ
ಬಳ್ಳಾರಿ : ಪಾಲಕರು ಮತ್ತು ಕುಟುಂಬದ ಸದಸ್ಯರು ಅಂಗವಿಕಲರನ್ನು ಮೂಲೆ ಗುಂಪು ಮಾಡದೆ ಅವರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಬೇಕು ಎಂದು ಸಂಡೂರು ಶಾಸಕಿ ಈ. ಅನ್ನಪೂರ್ಣ ತುಕಾರಾಮ್ ಹೇಳಿದರು.
ನಗರದ ಮುನ್ಸಿಪಲ್ ಕಾಲೇಜು ಆವರಣದಲ್ಲಿ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಹಾಗೂ ಕಾರ್ಖಾನೆಗಳು, ಕೈಗಾರಿಕಾ ಸುರಕ್ಷತೆ ಮತ್ತು ಆರೋಗ್ಯ ಇಲಾಖೆ ಹಾಗೂ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದೊಂದಿಗೆ ಜಿಲ್ಲೆಯ ವಿವಿಧ ಕೈಗಾರಿಕೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿ(ಸಿಎಸ್‌ಆರ್)ಯಡಿ ಶುಕ್ರವಾರ ಆಯೋಜಿಸಿದ್ದ ಜಿಲ್ಲೆಯ ಅಂಗವಿಕಲರಿಗೆ ಮೋಟಾರ್ ಚಾಲಿತ ತ್ರಿಚಕ್ರ ವಾಹನಗಳ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ದೇವರು ಒಂದು ಅಂಗವನ್ನು ವಿಕಲತೆ ಮಾಡಿದಾಗ ಮತ್ತೊಂದು ವಿಶೇಷ ಸಾಮರ್ಥ್ಯವನ್ನು ನೀಡಿರುತ್ತಾನೆ, ಅದನ್ನು ಗುರುತಿಸಿ ಪ್ರೋತ್ಸಾಹಿಸುವುದು ನಮ್ಮೆಲ್ಲರ ಕರ್ತವ್ಯ. ಸರ್ಕಾರವು ಇವರ ಅಭಿವೃದ್ಧಿಗೆ ಸದಾ ಬೆಂಬಲ ನೀಡುತ್ತಿದೆ ಎಂದರು.
ಡಿಸಿ ನಾಗೇಂದ್ರ ಪ್ರಸಾದ್ ಕೆ. ಮಾತನಾಡಿ, ಕೈಗಾರಿಕಾ ಸಂಸ್ಥೆಗಳು ತಮ್ಮ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್)ನಿಧಿಯನ್ನು ಅಂಗವಿಕಲರ ಸಬಲೀಕರಣ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹೆಚ್ಚು ಬಳಸಬೇಕು. ಅಂಗವಿಕಲರಿಗೆ ಸೌಲಭ್ಯಗಳನ್ನು ನೀಡುವಾಗ ಅಧಿಕಾರಿಗಳು ವಿಶೇಷ ಆದ್ಯತೆ ನೀಡಬೇಕು. ಧನಾತ್ಮಕ ಕಾಳಜಿಯ ಮೂಲಕ ಅವರಿಗೆ ಹೆಚ್ಚಿನ ಸವಲತ್ತುಗಳನ್ನು ನೀಡಿದಾಗ ಮಾತ್ರ ಅವರು ಸಮಾಜದಲ್ಲಿ ಸಮಾನವಾಗಿ ಬದುಕಲು ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ನಿಧಿ ಯೋಜನೆಯಡಿ 53 ವಿಕಲಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಿಸುವ ಗುರಿ ಹೊಂದಲಾಗಿದ್ದು, ಸಾಂಕೇತಿಕವಾಗಿ ಕೆಲವರಿಗೆ ಪ್ರಮಾಣಪತ್ರ ಹಾಗೂ ವಾಹನಗಳನ್ನು ಹಸ್ತಾಂತರಿಸಲಾಯಿತು.
====
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net