ಮನೆ ಬಾಗಿಲಿಗೆ ಸರ್ಕಾರಿ ಸೌಲಭ್ಯ

ಕೂಡ್ಲಿಗಿ ಶ್ರೀಮತಿ ಅಂಗಡಿ ವೀರಮ್ಮ, ತಿರುಕಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಜಾಸೇವೆ ಆಂದೋಲನ ಪೂರ್ವಭಾವಿ ಸಭೆ ನಡೆಯಿತು. ಶಾಸಕರಾದ ಡಾ.ಎನ್.ಟಿ.ಶ್ರೀನಿವಾಸ್, ಎಚ್.ಆರ್.ಗವಿಯಪ್ಪ, ಲತಾ ಮಲ್ಲಿಕಾರ್ಜುನ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕುರಿ ಶಿವಮೂರ್ತಿ, ಡಿಸಿ ಕವಿತಾ ಎಸ್. ಮನ್ನಿಕೇರಿ, ಸಿಇಒ ನೊಂಗ್ಜಾಯ್ ಅಕ್ರಂ ಅಲಿಷಾ ಇದ್ದರು.
ಕೂಡ್ಲಿಗಿ ಶ್ರೀಮತಿ ಅಂಗಡಿ ವೀರಮ್ಮ, ತಿರುಕಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಜಾಸೇವೆ ಆಂದೋಲನ ಪೂರ್ವಭಾವಿ ಸಭೆ ನಡೆಯಿತು. ಶಾಸಕರಾದ ಡಾ.ಎನ್.ಟಿ.ಶ್ರೀನಿವಾಸ್, ಎಚ್.ಆರ್.ಗವಿಯಪ್ಪ, ಲತಾ ಮಲ್ಲಿಕಾರ್ಜುನ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕುರಿ ಶಿವಮೂರ್ತಿ, ಡಿಸಿ ಕವಿತಾ ಎಸ್. ಮನ್ನಿಕೇರಿ, ಸಿಇಒ ನೊಂಗ್ಜಾಯ್ ಅಕ್ರಂ ಅಲಿಷಾ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಚಿವ ಕೆ.ಎಸ್.ಬಸವಂತಪ್ಪ ಹೇಳಿಕೆ
  • ಪೂರ್ವಭಾವಿ ಸಭೆ
ಕೂಡ್ಲಿಗಿ: ಕೂಡ್ಲಿಗಿಯಲ್ಲಿ ಸೆ.5ರಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಮಹತ್ವಾಕಾಂಕ್ಷೆ ಪ್ರಜಾಸೇವೆ ಅಭಿಯಾನಕ್ಕೆ ವಿಧ್ಯಕ್ತ್ತವಾಗಿ ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಬಸವಂತಪ್ಪ ತಿಳಿಸಿದರು.
ಶ್ರೀಮತಿ ಅಂಗಡಿ ವೀರಮ್ಮ, ತಿರುಕಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಜಾಸೇವೆ ಅಭಿಯಾನವನ್ನು ಸಿಎಂ ಶಿವಕುಮಾರ್ ಕೇವಲ ಪ್ರಚಾರಕ್ಕಾಗಿ ಮಾಡುತ್ತಿಲ್ಲ. ಸರ್ಕಾರ ಮತ್ತು ಆಡಳಿತ ವ್ಯವಸ್ಥೆಯೇ ಜನರ ಮನೆ ಬಾಗಿಲಿಗೆ ತೆರಳಿ ಸೌಲಭ್ಯಗಳನ್ನು ಒದಗಿಸುವ ಹಾಗೂ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ವಿನೂತನ ಕಾರ್ಯಕ್ರಮವಾಗಿದೆ. ಈ ಯೋಜನೆ ಅನುಷ್ಠಾನಕ್ಕಾಗಿ ಪ್ರಧಾನ ಕಾರ್ಯದರ್ಶಿಗಳಿಂದ ಹಿಡಿದು, ಜಿಲ್ಲಾ ಮಟ್ಟ ಹಾಗೂ ತಾಲೂಕು ಮಟ್ಟದವರೆಗೆ ಪ್ರತ್ಯೇಕ ಕಾರ್ಯವ್ಯವಸ್ಥೆ ಮತ್ತು ಸಚಿವಾಲಯವನ್ನು ರೂಪಿಸಲಾಗಿದೆ. ಹಿಂದುಳಿದ ತಾಲೂಕು ಎಂದು ಹಣೆಪಟ್ಟಿ ಹೊಂದಿರುವ ಈ ತಾಲೂಕಿನಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಶಿವಕುಮಾರ್ ರೂಪಿಸಿರುವುದು ಅವರ ದೂರದರ್ಶಿತ್ವದ ಯೋಜನೆಗೆ ಹಿಡಿದ ಕೈಗನ್ನಡಿಯಾಗಿದೆ. ಅಧಿಕಾರಿಗಳು ಕಾರ್ಯಕ್ರಮ ಯಶಸ್ಸಿಗೆ ಕಾರ್ಯಯೋಜನೆ ರೂಪಿಸಬೇಕು ಎಂದು ಸೂಚನೆ ನೀಡಿದರು.
ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಮಾತನಾಡಿ, ಕ್ಷೇತ್ರದಲ್ಲಿ 54 ಸಾವಿರ ಕುಟುಂಬಗಳು ಇದ್ದು, ಪ್ರತಿ ಕುಟುಂಬಕ್ಕೂ ಸಮಸ್ಯೆಗಳನ್ನು ಪಟ್ಟಿ ಮಾಡುವ ಅರ್ಜಿ ವಿತರಿಸಲಾಗುವುದು. ಸಮಸ್ಯೆ ನಮೂದಿಸಿ ಗ್ರಾಪಂ ವ್ಯಾಪ್ತಿಯ ಪ್ರತ್ಯೇಕ ಕೌಂಟರ್‌ನಲ್ಲಿ ಸೆ.5ರಂದು ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಆಯಾ ಇಲಾಖೆಗಳ ಮೂಲಕ ಅರ್ಜಿಗಳನ್ನು 21ದಿನಗಳಲ್ಲಿ ವಿಲೇವಾರಿ ಮಾಡಲಾಗುತ್ತದೆ ಎಂದರು.
ಕಾರ್ಯಕ್ರಮ ಅಂಗವಾಗಿ ಜನರನ್ನು ಕರೆತರಲು ತಾಲೂಕಿನಾದ್ಯಂತ 200 ಬಸ್‌ಗಳನ್ನು ಬಿಡಲಾಗಿದೆ. ಬೆಳಗ್ಗೆ ಉಪಾಹಾರ ವ್ಯವಸ್ಥೆ , ಕಾರ್ಯಕ್ರಮದ ನಂತರ ಊಟದ ವ್ಯವಸ್ಥೆ ಮಾಡಲಾಗಿದೆ. ಅಂದಾಜು 10 ಸಾವಿರ ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಉಸ್ತುವಾರಿ ಸಚಿವ ಕೆ.ಎಸ್.ಬಸವಂತಪ್ಪ ವೇದಿಕೆ ನಿರ್ಮಾಣ ಹಾಗೂ ಪಾರ್ಕಿಂಗ್ ವ್ಯವಸ್ಥೆ ಬಗ್ಗೆ ಅಧಿಕಾರಿಗಳ ಬಳಿ ಮಾಹಿತಿ ಪಡೆದು, ಸೂಕ್ತ ವ್ಯವಸ್ಥೆ ಕೈಗೊಳ್ಳಲು ಸೂಚನೆ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net