ಹಗರಿಬೊಮ್ಮನಹಳ್ಳಿ: ಡಾ.ಬಾಬು ಜಗಜೀವನ ರಾಮ್ ಅವರು ದೇಶದ ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಶೋಷಿತ ಸಮುದಾಯಗಳ ಹಕ್ಕುಗಳಿಗಾಗಿ ಅಪಾರ ಸೇವೆ ಸಲ್ಲಿಸಿದ್ದಾರೆ ಎಂದು ಶಾಸಕ ನೇಮಿರಾಜ್ ನಾಯ್ಕ ಹೇಳಿದರು.
ರಾಮನಗರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮಾಜಿ ಉಪಪ್ರಾಧಾನಿ ಡಾ.ಬಾಬು ಜಗಜೀವನ ರಾಮ್ ಅವರ 40ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಡಾ.ಬಾಬು ಜಗಜೀವನ ರಾಮ್ ವೃತ್ತದ ನಾಮಫಲಕ ಅನಾವರಣಗೊಳಿಸಿ ವೃತ್ತಕ್ಕೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು. ಬಾಬೂಜಿ ಅವರ ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಿ ಎಂದರು.