ಹವಾಮಾನಕ್ಕೆ ಅನುಗುಣ ಬೆಳೆ ಬೆಳೆಯಿರಿ

ಬಳ್ಳಾರಿಯ ಡಿಸಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ರೈತ ಮುಖಂಡರ ಸಭೆಯಲ್ಲಿ ಡಿಸಿ ಕೆ.ನಾಗೇಂದ್ರ ಪ್ರಸಾದ್, ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆ.ಎಂ.ಸೋಮಸುಂದರ್, ತೋಟಗಾರಿಕೆ ಜಂಟಿ ನಿರ್ದೇಶಕ ಶಶಿಕಾಂತ್ ಕೋಟಿಮನಿ ಇದ್ದರು.
ಬಳ್ಳಾರಿಯ ಡಿಸಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ರೈತ ಮುಖಂಡರ ಸಭೆಯಲ್ಲಿ ಡಿಸಿ ಕೆ.ನಾಗೇಂದ್ರ ಪ್ರಸಾದ್, ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆ.ಎಂ.ಸೋಮಸುಂದರ್, ತೋಟಗಾರಿಕೆ ಜಂಟಿ ನಿರ್ದೇಶಕ ಶಶಿಕಾಂತ್ ಕೋಟಿಮನಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ರೈತರ ಕಷ್ಟ-ನಷ್ಟಗಳು ಆಲಿಸಿ
  • ಜಿಲ್ಲಾಡಳಿತದ ಮುಖ್ಯ ಆದ್ಯತೆ
ಬಳ್ಳಾರಿ : ಸಾಂಪ್ರದಾಯಿಕ ಬೆಳೆ ನೆಚ್ಚಿಕೊಳ್ಳದೆ, ಪ್ರಸ್ತುತ ಹವಾಮಾನಕ್ಕೆ ಸೂಕ್ತವಾದ ಬೆಳೆ ಬೆಳೆಯಬೇಕು ಎಂದು ಡಿಸಿ ಕೆ.ನಾಗೇಂದ್ರ ಪ್ರಸಾದ್ ಹೇಳಿದರು. ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಮಳೆ ಕೊರತೆ ಹಿನ್ನೆಲೆ ಕುಡಿವ ನೀರು ಹಾಗೂ ಇತರೆ ಸಮಸ್ಯೆಗಳ ಹಿನ್ನೆಲೆ ಆಯೋಜಿಸಿದ್ದ ರೈತರೊಂದಿಗೆ ಸಭೆಯಲ್ಲಿ ಮಾತನಾಡಿದರು. ರೈತರ ಕಷ್ಟ-ನಷ್ಟಗಳು ಆಲಿಸಿ, ಸೂಕ್ತ ಪರಿಹಾರ ಕಂಡುಕೊಳ್ಳುವುದೇ ಜಿಲ್ಲಾಡಳಿತದ ಮುಖ್ಯ ಆದ್ಯತೆ. ರೈತರ ಅಹವಾಲು ಮತ್ತು ಸಲಹೆ ಆಲಿಸಿ ತಕ್ಷಣದ ಕ್ರಮ ಕೈಗೊಳ್ಳಲಾಗುವುದು. ಸರ್ಕಾರ ಹಾಗೂ ಜಿಲ್ಲಾಡಳಿತವು ಈ ಬರ ಎದುರಿಸಲು ಸಂಪೂರ್ಣ ಸಿದ್ಧವಾಗಿದ್ದು, ರೈತರೊಂದಿಗೆ ಸದಾ ಇರಲಿದೆ ಎಂದರು.
ಮಳೆ ಅಭಾವದ ನೇರ ಪರಿಣಾಮ ಜಲಾಶಯಗಳ ಮೇಲಾಗಿದ್ದು, ತುಂಗಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿದಿದೆ. ಕಳೆದ ವರ್ಷ ಇದೇ ವೇಳೆಗೆ 72 ಟಿಎಂಸಿ ನೀರಿತ್ತು. ಪ್ರಸ್ತುತ ಜಲಾಶಯದಲ್ಲಿ ಕೇವಲ 26 ಟಿಎಂಸಿ ನೀರು ಮಾತ್ರ ಸಂಗ್ರಹವಾಗಿದೆ ಎಂದರು. ಮಲೆನಾಡು ಪ್ರದೇಶದಲ್ಲಿ ಸ್ವಲ್ಪ ಮಳೆಯಾಗಿದ್ದರಿಂದ ದಿನಕ್ಕೆ ಸುಮಾರು 3,500 ಕ್ಯೂಸೆಕ್ಸ್ ಒಳಹರಿವು ದಾಖಲಾಗುತ್ತಿದೆ. ಮುಂದಿನ ದಿನಗಳಲ್ಲಿ ಒಳಹರಿವು 15 ರಿಂದ 20 ಸಾವಿರ ಕ್ಯೂಸೆಕ್‌ಗೆ ಏರಿಕೆಯಾಗಿ ಸತತವಾಗಿ ಹರಿದುಬಂದರೆ ಮಾತ್ರ ಪರಿಸ್ಥಿತಿ ಸುಧಾರಿಸಲಿದೆ ಎಂದು ತಿಳಿಸಿದರು.
ಜಿಲ್ಲಾಡಳಿತ ಮುಂದಿನ ಒಂದು ವಾರದಲ್ಲಿ ನೇರವಾಗಿ ರೈತರ ಜಮೀನುಗಳಿಗೆ ಭೇಟಿ ನೀಡಲಿದೆ. ರೈತರ ನೈಜ ಕಷ್ಟ-ನಷ್ಟಗಳನ್ನು ಪರಿಶೀಲಿಸಿ, ಸಮಗ್ರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ. ಜಮೀನುಗಳಿಗೆ ಭೇಟಿ ನೀಡುವಾಗ ಯಾವ ರೀತಿ ಪರಿಶೀಲನೆ ನಡೆಸಬೇಕು ಎಂಬ ಕುರಿತು ಅಧಿಕಾರಿಗಳಿಗೆ ಈಗಾಗಲೇ ವಿಶೇಷ ಕಾರ್ಯಾಗಾರ ನಡೆಸಿ ತರಬೇತಿ ನೀಡಲಾಗಿದೆ ಎಂದರು.
ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್ ಮಾತನಾಡಿ, ಜಿಲ್ಲೆಯಲ್ಲಿ ಎದುರಾಗಿರುವ ಬರ ಪರಿಸ್ಥಿತಿ ಮತ್ತು ಕುಡಿವ ನೀರಿನ ಅಭಾವ ಎದುರಿಸಲು ಜಿಲ್ಲಾಡಳಿತ ಹಾಗೂ ಜಿಪಂ ವ್ಯಾಪ್ತಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಕುಡಿವ ನೀರಿನ ಪೂರೈಕೆಗೆ ಮೊದಲ ಆದ್ಯತೆ ನೀಡಲಾಗುವುದು ಹಾಗೂ ಈ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿದರು.
ಹಿಂದಿನ ನರೇಗಾ ಖಾತ್ರಿ ಯೋಜನೆಯನ್ನು ‘ವಿಬಿ ಜಿ ರಾಮ್ ಜಿ’ ಎಂಬ ಹೊಸ ಹೆಸರಿನಲ್ಲಿ ಜಾರಿಗೆ ತರಲಾಗಿದ್ದು, ಮುಂಬರುವ ದಿನಗಳಲ್ಲಿ ಬರಪರಿಸ್ಥಿತಿ ಎದುರಾಗುವ ಸಾಧ್ಯತೆ ಇರುವುದರಿಂದ, ಗ್ರಾಮೀಣ ಭಾಗದ ಬಡವರು ಹಾಗೂ ಉದ್ಯೋಗವಿಲ್ಲದವರು ಗುಳೆ ಹೋಗದಂತೆ ಕ್ರಮವಹಿಸಲಾಗುವುದು ಎಂದರು.
==
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net