ಗೃಹಲಕ್ಷ್ಮಿ15 ಸಾವಿರ ಕೋಟಿ ರೂ.ಮಾಯ

ಸುದ್ದಿಗೋಷ್ಠಿಯಲ್ಲಿ  ಜೆಡಿಎಸ್ ಜಿಲ್ಲಾಧ್ಯಕ್ಷ ಬದಾಮಿ ಮೃತ್ಯುಂಜಯ, ಉಪಾಧ್ಯಕ್ಷ ಕೃಷ್ಣಮೂರ್ತಿ, ತಾಲೂಕು ಅಧ್ಯಕ್ಷ ವೈ.ಮಲ್ಲಿಕಾರ್ಜುನ, ಪ್ರಮುಖರಾದ ಕನ್ನಿಹಳ್ಳಿ ಚಂದ್ರಶೇಖರ್ ಮತ್ತಿತರರು ಇದ್ದರು.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಬದಾಮಿ ಮೃತ್ಯುಂಜಯ, ಉಪಾಧ್ಯಕ್ಷ ಕೃಷ್ಣಮೂರ್ತಿ, ತಾಲೂಕು ಅಧ್ಯಕ್ಷ ವೈ.ಮಲ್ಲಿಕಾರ್ಜುನ, ಪ್ರಮುಖರಾದ ಕನ್ನಿಹಳ್ಳಿ ಚಂದ್ರಶೇಖರ್ ಮತ್ತಿತರರು ಇದ್ದರು.
Published on
ಹಗರಿಬೊಮ್ಮನಹಳ್ಳಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಶಾಸಕ ಕೆ.ನೇಮಿರಾಜ್ ನಾಯ್ಕ ದೂರಿದರು.
ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ಯಲ್ಲಿ ಪೊಲೀಸರಿಗೆ ಕಲ್ಲೇಟು ಬಿದ್ದು ಗಾಯವಾಗಿದ್ದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳುತ್ತಿಲ್ಲ. ಗ್ಯಾರಂಟಿ ಯೋಜನೆಗಳು ಫಲಾನುಭವಿ ಗಳಿಗೆ ಸಮರ್ಪಕವಾಗಿ ತಲುಪುತ್ತಿಲ್ಲ. ಬಸ್‌ಗಳ ಉಚಿತ ಪ್ರಯಾಣ ಸೌಲಭ್ಯದಿಂದಾಗಿ ಸಾರಿಗೆ ನೌಕರರ ಬೇಡಿಕೆಗಳು ಈಡೇರುತ್ತಿಲ್ಲ. ವಿದ್ಯಾರ್ಥಿಗಳ ಪ್ರಯಾಣಕ್ಕೂ ಕಂಟಕವಾಗಿದೆ. ಗೃಹಲಕ್ಷ್ಮಿ ಯೋಜನೆಯ ಆರು ತಿಂಗಳ ಮೊತ್ತ 15 ಸಾವಿರ ಕೋಟಿ ರೂ. ಫಲಾನುಭವಿಗಳ ಖಾತೆಗೆ ಜಮಾ ಆಗದೆ ಮಾಯವಾಗಿದೆ ಎಂದು ಆರೋಪಿಸಿದರು.
ರಸಗೊಬ್ಬರಗಳ ಬೆಲೆ ಗಗನಕ್ಕೇರಿವೆ. ವಿದ್ಯಾರ್ಥಿಗಳಿಗೆ ವಾರ್ಷಿಕ ಶಿಷ್ಯ ವೇತನ ನೀಡುತ್ತಿಲ್ಲ. ಇಲ್ಲಗಳ ಸರ್ಕಾರದಲ್ಲಿ ಅಭಿವೃದ್ಧಿ ಕೆಲಸ ಕೈಗೆತ್ತಿಕೊಳ್ಳುವಲ್ಲಿ ಗುತ್ತಿಗೆದಾರರು ಹಿಂದೇಟು ಹಾಕುತಿದ್ದಾರೆ. ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ರಾಜ್ಯ ವ್ಯಾಪಿ ಸಂಚರಿಸಿ ರಾಜ್ಯ ಸರ್ಕಾರದ ವೈಫಲ್ಯದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಾ.1ರಂದು ಪಟ್ಟಣಕ್ಕೆ ಆಗಮಿಸಲಿದ್ದು, ಅಂದು ಜೆಡಿಎಸ್ ವಿಜಯನಗರ ಜಿಲ್ಲಾಧ್ಯಕ್ಷ ಬದಾಮಿ ಮೃತ್ಯುಂಜಯ ಪದಗ್ರಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಬದಾಮಿ ಮೃತ್ಯುಂಜಯ, ಉಪಾಧ್ಯಕ್ಷ ಕೃಷ್ಣಮೂರ್ತಿ, ತಾಲೂಕು ಅಧ್ಯಕ್ಷ ವೈ.ಮಲ್ಲಿಕಾರ್ಜುನ, ಪ್ರಮುಖರಾದ ಕನ್ನಿಹಳ್ಳಿ ಚಂದ್ರಶೇಖರ್ ಮತ್ತಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net