ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಮಾರ್ಗದರ್ಶನ

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ ಜಾರ್ಖಂಡ್ ಡಿಐಜಿ ವೈ.ಎಸ್.ರಮೇಶ್ ಅವರನ್ನು ಸನ್ಮಾನಿಸಲಾಯಿತು.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ ಜಾರ್ಖಂಡ್ ಡಿಐಜಿ ವೈ.ಎಸ್.ರಮೇಶ್ ಅವರನ್ನು ಸನ್ಮಾನಿಸಲಾಯಿತು.
Published on
ಬಳ್ಳಾರಿ: ಸರ್ಕಾರ ಅವಕಾಶ ನೀಡಿದರೆ ಕರ್ನಾಟಕ ಮಾತೆಯ ಸೇವೆ ಸಲ್ಲಿಸಲು ಸಿದ್ಧ. ಕರ್ನಾಟಕದ ವಿದ್ಯಾರ್ಥಿಗಳಿಗೆ ಯುಪಿಎಸ್‌ಸಿ ಪರೀಕ್ಷೆಗೆ ಅಗತ್ಯವಾಗಿರುವ ಮಾರ್ಗದರ್ಶನ ನೀಡಲು ಉತ್ಸುಕನಾಗಿರುವೆ ಎಂದು ಜಾರ್ಖಂಡ್ ಡಿಐಜಿ, ಜಿಲ್ಲೆಯ ಮೂಲದ ವೈ.ಎಸ್.ರಮೇಶ್ ಹೇಳಿದರು.
ನಗರದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಕಚೇರಿಯಲ್ಲಿ ಸನ್ಮಾನ ಸ್ವೀಕರಿಸಿ ಭಾನುವಾರ ಮಾತನಾಡಿದರು. ಸಂಸ್ಥೆ ಅಧ್ಯಕ್ಷ ಅವ್ವಾರು ಮಂಜುನಾಥ್ ಮಾತನಾಡಿ, ಬಳ್ಳಾರಿ ಜಿಲ್ಲೆಯ ವೈ.ಎಸ್.ರಮೇಶ್ ಅವರು ಜಾರ್ಖಂಡ್‌ನಲ್ಲಿ ಎಸ್ಪಿಯಾಗಿ ವಿವಿಧೆಡೆ ಕಾರ್ಯನಿರ್ವಹಿಸಿ ಇದೀಗ ಡಿಐಜಿ ಆಗಿ ಬಡ್ತಿ ಹೊಂದಿದ್ದಾರೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net