ಬಳ್ಳಾರಿ : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಪತ್ನಿ ಚನ್ನಮ್ಮ ಆಗಲಿದ್ದು, ನಾಡಿನ ಜನರಿಗೆ ಹಾಗೂ ಕಾರ್ಯಕರ್ತರಿಗೆ ದುಖಃ ತರಿಸಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ಹೇಳಿದರು.
ನಗರದ ಜೆಡಿಎಸ್ ಕಚೇರಿಯಲ್ಲಿ ಆಯೋಜಿಸಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚನ್ನಮ್ಮ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇವರು ಅವರ ಆತ್ಮಕ್ಕೆ ಶಾಂತಿ, ನೆಮ್ಮದಿ ನೀಡಲಿ, ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದರು. ಮನೆಗೆ ಯಾರೇ ಬರಲಿ ಅವರನ್ನು ಪ್ರೀತಿಯಿಂದ ಸ್ವಾಗತಿಸಿ ತಾಯಿಯಂತೆ ನೋಡಿಕೊಳ್ಳುತ್ತಿದ್ದರು. ತಾಯಿಯಾಗಿ ಎಲ್ಲ ಜವಾಬ್ದಾರಿಗಳನ್ನು ಸಾರ್ಥಕವಾಗಿ ಪೂರೈಸಿದ ಕರುಣಾಮಯಿ. ಮನೆ ಬಾಗಿಲಿಗೆ ಬಂದವರನ್ನು ಗೌರವದಿಂದ ಕಾಣುತ್ತಿದ್ದರು. ಪ್ರಧಾನ ಮಂತ್ರಿ ಅವರ ಪತ್ನಿ ಎನ್ನುವ ಬೇಧ ಭಾವ ಇಲ್ಲದೇ ಎಲ್ಲರನ್ನೂ ಅಕ್ಕರೆಯಿಂದ ನೋಡಿಕೊಳ್ಳುತ್ತಿದ್ದರು ಎಂದು ಸ್ಮರಿಸಿದರು.