ಪಕ್ಷದ ವಿವಿಧ ಹುದ್ದೆಗಳನ್ನು ನಿಭಾಯಿಸಿರುವ ವೆಂಕಟೇಶ್ ಹೆಗಡೆ ಅವರನ್ನು ಈ ಮೊದಲು ರಾಯಚೂರು ಜಿಲ್ಲಾ ಉಸ್ತುವಾರಿಯನ್ನಾಗಿ ನಿಯೋಜಿಸಲಾಗಿದ್ದು, ಇದೀಗ ಕೊಪ್ಪಳ ಜಿಲ್ಲಾ ಉಸ್ತುವಾರಿಯನ್ನಾಗಿ ನಿಯೋಜಿಸಲಾಗಿದೆ. ಪಕ್ಷ ನೀಡಿರುವ ಜವಾಬ್ದಾರಿಯನ್ನು ಚಾಚೂ ತಪ್ಪದೇ ಪಾಲಿಸಿ, ಪಕ್ಷವನ್ನು ತಳಮಟ್ಟದಿಂದ ಸಂಘಟಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ವೆಂಕಟೇಶ್ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.