ಕುರುಗೋಡು ಪಿಎಂಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ಜಾಥಾಕ್ಕೆ ಗ್ರೇಡ್ 2 ತಹಸೀಲ್ದಾರ್ ಮಲ್ಲೇಶಪ್ಪ ಚಾಲನೆ ನೀಡಿದರು. ತಾಪಂ ಸಹಾಯಕ ನಿರ್ದೇಶಕ ಶಿವರಾಮರೆಡ್ಡಿ, ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎ.ಮೌನೇಶ್ ಇತರರಿದ್ದರು.
ಕುರುಗೋಡು: ಮಕ್ಕಳು ಸಮಾಜಮುಖಿ ಕಾರ್ಯದಲ್ಲಿ ಭಾಗವಹಿಸುವ ಜತೆಗೆ ಪ್ರತಿಭೆಯನ್ನು ಪ್ರದರ್ಶಿಸಬೇಕು ಎಂದು ತಾಪಂ ಸಹಾಯಕ ನಿರ್ದೇಶಕ ಶಿವರಾಮ ರೆಡ್ಡಿ ಹೇಳಿದರು.
ಪಟ್ಟಣದ ಪಿಎಂಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಪ್ರಯುಕ್ತ ಆಯೋಜಿಸಿದ್ದ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ಬಾಲ ಕಾರ್ಮಿಕ ಪದ್ಧತಿ ತಡೆಗೆ ಪ್ರತಿಯೊಬ್ಬರೂ ಸಹಕರಿಸಬೇಕೆಂದರು.
ಕಾರ್ಮಿಕ ನಿರೀಕ್ಷಕ ಪರಶುರಾಮ್ ಮಾತನಾಡಿ, ತಾಲೂಕಿನಲ್ಲಿ ಶಾಲೆ ಬಿಟ್ಟ ಹಾಗೂ ಬಾಲ ಕಾರ್ಮಿಕರಾಗಿ ದುಡಿಯುತ್ತಿರುವ ಮಕ್ಕಳು ಕಂಡುಬಂದಲ್ಲಿ ಮಾಹಿತಿ ನೀಡಬೇಕು. ಇದರಿಂದ ಮಕ್ಕಳನ್ನು ರಕ್ಷಿಸಿ, ಅವರಿಗೆ ಮರುಶಿಕ್ಷಣ ನೀಡಿ ಮುಖ್ಯವಾಹಿನಿಗೆ ತರಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಬಾಲಕನನ್ನು ರಕ್ಷಸಿ ಮುಷ್ಟುಗಟ್ಟೆಯ ಮುರಾರ್ಜಿ ವಸತಿ ಶಾಲೆಗೆ ಕಳುಹಿಸಲಾಯಿತು. ಸಂಪನ್ಮೂಲ ವ್ಯಕ್ತಿ ಜಡೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಮಂಜುಳಾ ಇದ್ದರು.