2017ರಲ್ಲಿ ಗೃಹರಕ್ಷಕ ದಳದ ಸಂಸ್ಥೆಗೆ ಸೇರ್ಪಡೆಗೊಂಡಿದ್ದಾರೆ. ಕಳೆದ ಕೆಲ ವರ್ಷಗಳ ಹಿಂದೆ ಕೊಳಗಲ್ ಗ್ರಾಮದ ಎಚ್‌ಎಲ್‌ಸಿ ಕಾಲುವೆಯಲ್ಲಿ ಆಟೋ ಪಲ್ಟಿಯಾಗಿ ಏಳು ಜನರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದರು. ಇವರ ಮೃತದೇಹಗಳನ್ನು ಪತ್ತೆ ಹಚ್ಚುವಲ್ಲಿ ನಿರಂತರ ಶ್ರಮಿಸಿದ್ದರು. ಅಲ್ಲದೆ, ಕೇವಲ ತಮ್ಮ ಜಿಲ್ಲೆಯಲ್ಲಷ್ಟೇ ಅಲ್ಲದೆ, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತುರ್ತು ಸಂದರ್ಭ ಎದುರಾದಾಗ ತೆರಳಿ ದಕ್ಷತೆಯಿಂದ ಸೇವೆ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರ ಇವರ ಸೇವೆ ಪರಿಗಣಿಸಿ ಸಿಎಂ ಪದಕ ಘೋಷಿಸಿದೆ.