

ಕಂಪ್ಲಿ: ನೀರಾವರಿ ಸಲಹಾ ಸಮಿತಿ(ಐಸಿಸಿ)ಸಭೆ ಕರೆಯುವುದು ಸೇರಿ ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತ ಸಂಘದ ಪದಾಧಿಕಾರಿಗಳು ಮುನಿರಾಬಾದ್‌ನ ಕರ್ನಾಟಕ ನೀರಾವರಿ ನಿಗಮದ ಅಧೀಕ್ಷಕ ಅಭಿಯಂತರ ಎಸ್.ಬಿ.ಮಲ್ಲಿಗವಾಡ್‌ಗೆ ಸೋಮವಾರ ಮನವಿ ಸಲ್ಲಿಸಿದರು.
ಸಂಘದ ರಾಜ್ಯ ಕಾರ್ಯಾಧ್ಯಕ್ಷ ಬಿ.ವಿ.ಗೌಡ ಮಾತನಾಡಿ, ಕಳೆದ ನಾಲ್ಕೈದು ದಿನಗಳಿಂದ ತುಂಗಭದ್ರಾ ಜಲನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ಜಲಾಶಯದಲ್ಲಿ ಸದ್ಯ 45ಟಿಎಂಸಿ ಅಡಿ ನೀರು ಸಂಗ್ರಹವಿದೆ. ನಿತ್ಯ 40ಸಾವಿರ ಕ್ಯೂಸೆಕ್‌ಗೂ ಅಧಿಕ ನೀರು ಹರಿದು ಬರುತ್ತಿದೆ. ಹೀಗಾಗಿ ಆ.7ರೊಳಗಾಗಿ ರೈತರ ಸಮ್ಮುಖದಲ್ಲಿ ಐಸಿಸಿ ಸಭೆಯನ್ನು ಮುನಿರಾಬಾದಿನಲ್ಲಿ ಕರೆಯಬೇಕು
ಆರ್ಥಿಕ ಸಂಕಷ್ಟದಲ್ಲಿರುವ ರೈತರ ಹಿತದೃಷ್ಟಿಯಿಂದ ಈಗಾಗಲೇ ಬೆಳೆದು ನಿಂತಿರುವ ಬೆಳೆಗಳಿಗೆ, ಜಲಶಯದ ಎಲ್ಲ ಕಾಲುವೆಗಳಿಗೆ ನೀರು ಹರಿಸಬೇಕು. ಇಲ್ಲದಿದ್ದರೆ ಮುನಿರಾಬಾದ್ ಕೇಂದ್ರ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು ಎಂದು ಎಚ್ಚರಿಸಿದರು. ರಾಜ್ಯ ಉಪಾಧ್ಯಕ್ಷ ಖಾಜಾಹುಸೇನ್ ನಿಯಾಜಿ ಇದ್ದರು.