ಈ ಹಿನ್ನೆಲೆಯಲ್ಲಿ ಪಟ್ಟಣದ ಕೈಗಾರಿಕೆ ಪ್ರದೇಶದಲ್ಲಿರುವ ಐಸ್‌ಕ್ರೀಮ್ ತಯಾರಿಕಾ ಘಟಕಗಳಿಗೆ ಭೇಟಿ ನೀಡಿದಾಗ ಸ್ವಚ್ಛತೆ ಇಲ್ಲದಿರುವುದರಿಂದ ದುರ್ನಾತ ಬೀರುವುದು ಕಂಡುಬಂದಿದೆ. ಪ್ರಯೋಗಾಲಯದ ವರದಿ ಬಂದ ನಂತರ ಘಟಕಗಳ ವಿರುದ್ಧ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು. ತಾಲೂಕ ವೈದ್ಯಾಧಿಕಾರಿ ಅಶೋಕ, ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಕೆ.ಮಾರುತಿ, ಸಿಬ್ಬಂದಿ ಇದ್ದರು.