ಬಳ್ಳಾರಿ : ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 3.2 ಕೆ.ಜಿ. ಗಾಂಜಾವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಸಂಡೂರು ತಾಲೂಕಿನ ವಡ್ಡು ಗ್ರಾಮದ ಬಳಿ ಇತ್ತೀಚೆಗೆ ವಶಪಡಿಸಿಕೊಂಡಿದ್ದಾರೆ.
ವ್ಯಕ್ತಿಯೊಬ್ಬ ಅಧಿಕಾರಿಗಳನ್ನು ಕಂಡು ರಸ್ತೆಯಲ್ಲಿ ದ್ವಿಚಕ್ರ ವಾಹನವನ್ನು ರಸ್ತೆಯ ಮಧ್ಯೆದಲ್ಲಿಯೇ ಬಿಟ್ಟು ಪರಾರಿಯಾಗಿದ್ದು, ಮೆಹಬೂಬ್ ಬಾಷ್ ಎಂಬುದಾಗಿ ಗುರುತಿಸಲಾಗಿದೆ. 3.20 ಲಕ್ಷ ರೂ. ಮೌಲ್ಯದ ಗಾಂಜಾ, ಬೈಕ್ ವಶಕ್ಕೆ ಪಡೆದು ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ