ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಮಾಜಿ ಸಿಎಂ ಸಿದ್ದರಾಮಯ್ಯ ಹಿಂದುಳಿದ, ಅಲ್ಪಸಂಖ್ಯಾತ ಹಾಗೂ ದಲಿತ ಸಮುದಾಯಗಳ ಒಕ್ಕೂಟವಾದ ಅಹಿಂದವನ್ನು ಆರಂಭಿಸಿ, ಅದರ ಮೂಲಕ ಎರಡು ಬಾರಿ ಮುಖ್ಯಮಂತ್ರಿಯಾದರು. ಆದರೆ, ಅಧಿಕಾರಕ್ಕೆ ಬಂದ ಬಳಿಕ ಅಹಿಂದ ವರ್ಗಗಳಿಗೆ ಅವರು ಮಾಡಿದ್ದೇನು ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ. ಅಲ್ಪಸಂಖ್ಯಾತರಿಗೆ ಸಾಕಷ್ಟು ಅನುಕೂಲ ಮಾಡಿಕೊಟ್ಟಿದ್ದನ್ನು ಬಿಟ್ಟರೆ, ಹಿಂದುಳಿದ ವರ್ಗಗಳಿಗೆ ಸಂಪೂರ್ಣ ಅನ್ಯಾಯ ಮಾಡಿದ್ದಾರೆ ಎಂದು ದೂರಿದರು.