ಜಾಬ್ ಕಾರ್ಡ್ ಅಭಿಯಾನ ಆರಂಭ

ಹರಪನಹಳ್ಳಿ ತಾಲೂಕಿನ ಚಿರಸ್ತಹಳ್ಳಿ ಗ್ರಾಪಂ ವ್ಯಾಪ್ತಿಯ ಕಾರ್ಮಿಕರಿಗೆ ವಿಬಿ-ಜಿ-ರಾಮ್ ಜಿ ಕಾರ್ಡ್ ವಿತರಿಸಲಾಯಿತು.
ಹರಪನಹಳ್ಳಿ ತಾಲೂಕಿನ ಚಿರಸ್ತಹಳ್ಳಿ ಗ್ರಾಪಂ ವ್ಯಾಪ್ತಿಯ ಕಾರ್ಮಿಕರಿಗೆ ವಿಬಿ-ಜಿ-ರಾಮ್ ಜಿ ಕಾರ್ಡ್ ವಿತರಿಸಲಾಯಿತು.
Published on

ಪ್ರಮುಖ ಮುಖ್ಯಾಂಶಗಳು

  • ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವೈ.ಎಚ್.ಚಂದ್ರಶೇಖರ್ ಮಾಹಿತಿ

ಹರಪನಹಳ್ಳಿ: ಬರಗಾಲದಿಂದ ಗ್ರಾಮೀಣ ಪ್ರದೇಶದಲ್ಲಿ ಕೃಷಿ ಚಟುವಟಿಕೆಗಳು ಕುಂಠಿತಗೊಂಡಿದ್ದು, ಜನರ ಗುಳೆ ತಡೆದು ಸ್ಥಳೀಯವಾಗಿಯೇ ಉದ್ಯೋಗ ಒದಗಿಸಲು ಆರ್ಡಿಪಿಆರ್ ಇಲಾಖೆಯಿಂದ ಆ.15ರಿಂದ ತಾಲೂಕಿನ ಎಲ್ಲ ಗ್ರಾಪಂಗಳಲ್ಲಿ ಜಾಬ್ ಕಾರ್ಡ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವೈ.ಎಚ್.ಚಂದ್ರಶೇಖರ್ ತಿಳಿಸಿದರು.

ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕ ಮಿಷನ್ ಗ್ರಾಮೀಣ (ವಿಬಿ ಜಿ ರಾಮ್ ಜಿ) ಯೋಜನೆಯಡಿ ನೋಂದಾಯಿತ ಹಾಗೂ ಇ-ಕೆವೈಸಿ ಪೂರ್ಣಗೊಂಡಿರುವ ಎಲ್ಲ ಕೂಲಿಕಾರರಿಗೆ ಅಕುಶಲ ಕೆಲಸ ನೀಡಿದ್ದರೂ ಜುಲೈ ತಿಂಗಳಿನ ಸಾಧನೆ ಅತೃಪ್ತಿಯಾಗಿದೆ.
ತಾಲೂಕಿನ ಒಟ್ಟು 1,21,739 ನೊಂದಾಯಿತ ಉದ್ಯೋಗಿಗಳ ಪೈಕಿ ಕೇವಲ 57,539 ಕುಟುಂಬಗಳು ಮಾತ್ರ ಸಕ್ರಿಯವಾಗಿರುವುದು ಕಂಡುಬಂದಿದೆ. ಭಾಗವಹಿಸುವಿಕೆ ಹೆಚ್ಚಿಸಲು ಹಾಗೂ ಪ್ರತಿದಿನ ಗ್ರಾಪಂನಲ್ಲಿ ಕನಿಷ್ಠ 100 ಮಾನವ ದಿನಗಳ ಸೃಜಿಸುವ ಮೂಲಕ ನಿಗದಿತ ಗುರಿ ಸಾಧಿಸಿ ಗ್ರಾಮೀಣ ಜನರ ಆರ್ಥಿಕ ಹಾಗೂ ಜೀವನೋಪಾಯದ ಭದ್ರತೆ ಕಲ್ಪಿಸುತ್ತಿದೆ.
ಬರ ಪರಿಸ್ಥಿತಿ ಎದುರಿಸಲು ಜಲಸಂರಕ್ಷಣೆ, ಅಂತರ್ಜಲ ಮರುಪೂರಣ ಹಾಗೂ ದೀರ್ಘಕಾಲಿಕ ಜೀವನೋಪಾಯಕ್ಕೆ ನೆರವಾಗುವ ಕಾಮಗಾರಿಗಳಿಗೆ ಆದ್ಯತೆ ನೀಲಾಗುವುದು. ಅರ್ಹ ಕೂಲಿಕಾರರು ಸದ್ಬಳಕೆ ಮಾಡಿಕೊಳ್ಳಿ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net