ಮಾದರಿ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ

ಹಗರಿಬೊಮ್ಮನಹಳ್ಳಿಯ ಸೇವಾಲಾಲ್ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಮ್ಮಿಕೊಂಡಿದ್ದ ಮದ್ಯವರ್ಜನ ಶಿಬಿರವನ್ನು ಡಾ.ಮಹೇಶ್ವರ ಸ್ವಾಮೀಜಿ ಉದ್ಘಾಟಿಸಿದರು. ಶಾಸಕ ಕೆ.ನೇಮಿರಾಜ್ ನಾಯ್ಕ, ಜೆಡಿಎಸ್ ಜಿಲ್ಲಾಧ್ಯಕ್ಷ ಬಾದಾಮಿ ಮೃತ್ಯುಂಜಯ, ತಾಲೂಕು ಯೋಜನಾಧಿಕಾರಿ ಚಂದ್ರಶೇಖರ್ ಇತರರಿದ್ದರು.
ಹಗರಿಬೊಮ್ಮನಹಳ್ಳಿಯ ಸೇವಾಲಾಲ್ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಮ್ಮಿಕೊಂಡಿದ್ದ ಮದ್ಯವರ್ಜನ ಶಿಬಿರವನ್ನು ಡಾ.ಮಹೇಶ್ವರ ಸ್ವಾಮೀಜಿ ಉದ್ಘಾಟಿಸಿದರು. ಶಾಸಕ ಕೆ.ನೇಮಿರಾಜ್ ನಾಯ್ಕ, ಜೆಡಿಎಸ್ ಜಿಲ್ಲಾಧ್ಯಕ್ಷ ಬಾದಾಮಿ ಮೃತ್ಯುಂಜಯ, ತಾಲೂಕು ಯೋಜನಾಧಿಕಾರಿ ಚಂದ್ರಶೇಖರ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ನಂದಿಪುರ ಕ್ಷೇತ್ರದ ಡಾ.ಮಹೇಶ್ವರ ಸ್ವಾಮೀಜಿ ಸಲಹೆ
  • ಮದ್ಯವರ್ಜನ ಶಿಬಿರ

ಹಗರಿಬೊಮ್ಮನಹಳ್ಳಿ: ಕುಡಿತದಿಂದ ಮಾನಸಿಕ ಹಿಂಸೆ, ಅಸ್ಥಿರತೆ, ದೈಹಿಕ ನೋವು ಹಾಗೂ ಕುಟುಂಬದ ನೆಮ್ಮದಿ ಹಾಳಾಗುತ್ತದೆ. ಇದರಿಂದ ದೂರವಿದ್ದು ಮನೆಗೆ ದಾರಿದೀಪವಾಗಿ ಎಂದು ನಂದಿಪುರ ಕ್ಷೇತ್ರದ ಡಾ.ಮಹೇಶ್ವರ ಸ್ವಾಮೀಜಿ ಹೇಳಿದರು.

ಸೇವಾಲಾಲ್ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಭಾನುವಾರ ಹಮ್ಮಿಕೊಂಡಿದ್ದ ಮದ್ಯವರ್ಜನ ಶಿಬಿರದಲ್ಲಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಯುವಕರು ದುಶ್ಚಟಕ್ಕೆ ದಾಸರಾಗಿ ಅಮೂಲ್ಯ ಜೀವನ ಹಾಳುಮಾಡಿಕೊಳ್ಳುತ್ತಿದ್ದಾರೆ. ಕುಡಿತ ಬಿಟ್ಟು ಮಾದರಿ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದರು.
ಶಾಸಕ ಕೆ.ನೇಮಿರಾಜ್ ನಾಯ್ಕ ಮಾತನಾಡಿ, ಧರ್ಮಸ್ಥಳ ಸಂಸ್ಥೆ ಸಮಾಜದಲ್ಲಿ ಸಾಕಷ್ಟು ಜನಸೇವೆ ಮಾಡುತ್ತಿದೆ. ಜನರ ಆರ್ಥಿಕ ಸ್ಥಿತಿ ಸುಧಾರಿಸುವಲ್ಲಿ ಮುಖ್ಯ ಪಾತ್ರ ವಹಿಸಿದೆ. ಕುಡಿತಕ್ಕೆ ಬಲಿಯಾಗಿ ಜೀವನ ಹಾಳು ಮಾಡಿಕೊಳ್ಳಬೇಡಿ ಎಂದು ತಿಳಿಸಿದರು. 70ಕ್ಕೂ ಹೆಚ್ಚು ಶಿಬಿರಾರ್ಥಿಗಳು ಪಾಲ್ಗೊಂಡಿದ್ದರು.
ತಾಲೂಕು ಯೋಜನಾಧಿಕಾರಿ ಚಂದ್ರಶೇಖರ್, ಜನಜಾಗೃತಿ ವೇದಿಕೆ ರಾಜ್ಯ ಸಂಘಟನೆ ಅಧ್ಯಕ್ಷ ಬಾದಾಮಿ ನಟರಾಜ, ಜಿಲ್ಲಾಧ್ಯಕ್ಷ ಕಾವಲಿ ಶಿವಪ್ಪ ನಾಯಕ, ಉಪಾಧ್ಯಕ್ಷೆ ಶಿಲ್ಪಾ, ಡಿವೈಎಸ್‌ಪಿ ಭೀಮೇಶ್ ಗುಜ್ಜಲ್, ಯೋಜನಾಧಿಕಾರಿ ನಾಗೇಶ್, ಜೆಡಿಎಸ್ ಜಿಲ್ಲಾಧ್ಯಕ್ಷ ಬಾದಾಮಿ ಮೃತ್ಯುಂಜಯ, ಟಿಎಚ್‌ಒ ಡಾ.ಪ್ರವೀಣ್, ಪುರಸಭೆ ಸದಸ್ಯ ನೆಲ್ಲು ಇಸ್ಮಾಯಿಲ್, ಪ್ರಮುಖರಾದ ಹನಸಿ ದೇವರಾಜ, ನೆಲ್ಕುದ್ರಿ ಚಂದ್ರಪ್ಪ, ಹೊನ್ನೂರಪ್ಪ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net