ಪೊಲೀಸ್ ಇಲಾಖೆಯೊಂದಿಗೆ ಕೈ ಜೋಡಿಸಿ

ಕೊಟ್ಟೂರಿನ ಪೊಲೀಸ್ ಠಾಣೆ ಆವರಣದಲ್ಲಿ ಹೆಲ್ಮೆಟ್ ಕುರಿತು ವಾಹನ ಸವಾರರಲ್ಲಿ ಜಾಗೃತಿ ಮೂಡಿಸಲಾಯಿತು. ಪಿಎಸ್‌ಐ ಗೀತಾಂಜಲಿ ಶಿಂಧೆ, ಸಿಬ್ಬಂದಿ ಇದ್ದರು.
ಕೊಟ್ಟೂರಿನ ಪೊಲೀಸ್ ಠಾಣೆ ಆವರಣದಲ್ಲಿ ಹೆಲ್ಮೆಟ್ ಕುರಿತು ವಾಹನ ಸವಾರರಲ್ಲಿ ಜಾಗೃತಿ ಮೂಡಿಸಲಾಯಿತು. ಪಿಎಸ್‌ಐ ಗೀತಾಂಜಲಿ ಶಿಂಧೆ, ಸಿಬ್ಬಂದಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪಿಎಸ್‌ಐ ಗೀತಾಂಜಲಿ ಶಿಂಧೆ ಹೇಳಿಕೆ
ಕೊಟ್ಟೂರು: ವಾಹನ ಸವಾರರು ಹೆಲ್ಮೆಟ್ ಧರಿಸಿ ಅಮೂಲ್ಯ ಜೀವ ಕಾಪಾಡಿಕೊಳ್ಳಬೇಕೆಂಬ ಸದುದ್ದೇಶದಿಂದ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ. ದಂಡ ವಿಧಿಸುವುದು ಪೊಲೀಸರ ಉದ್ದೇಶವಲ್ಲ ಎಂದು ಪಿಎಸ್‌ಐ ಗೀತಾಂಜಲಿ ಶಿಂಧೆ ಹೇಳಿದರು.
ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಶುಕ್ರವಾರ ಹೆಲ್ಮೆಟ್ ಧರಿಸದ ವಾಹನ ಸವಾರರನ್ನು ತಡೆಹಿಡಿದು ಜಾಗೃತಿ ಮೂಡಿಸಿದರು. ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಹೆಲ್ಮೆಟ್ ಧರಿಸುವ ಮೂಲಕ ಪೊಲೀಸ್ ಇಲಾಖೆಯೊಂದಿಗೆ ಕೈ ಜೋಡಿಸಬೇಕು ಎಂದರು. ಹೆಲ್ಮೆಟ್ ಧರಿಸದ ಸವಾರರ ವಾಹನ ವಶಕ್ಕೆ ಪಡೆದು ಹೆಲ್ಮೆಟ್ ತಂದ ಬಳಿಕ ದಂಡ ವಿಧಿಸದೆ ವಾಹನ ಹಿಂದಿರುಗಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net