ಕುರುಗೋಡಿನಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಬಿಆರ್‌ಸಿ ಮನೋಹರ್ ಉದ್ಘಾಟಿಸಿದರು.
Published on:
Copied
Follow Us
ಕುರುಗೋಡು: ಮಕ್ಕಳ ವ್ಯಕ್ತಿತ್ವ ವಿಕಸನ ಮತ್ತು ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ಬಿಆರ್‌ಸಿ ಮನೋಹರ್ ಕುಮಾರ್ ಹೇಳಿದರು.
ಪಟ್ಟಣದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಉದ್ಘಾಟಿಸಿ ಮಂಗಳವಾರ ಮಾತನಾಡಿದರು. ತೀರ್ಪುಗಾರರು ಪಕ್ಷಪಾತವಿಲ್ಲದೆ ಫಲಿತಾಂಶ ನೀಡಬೇಕು ಎಂದರು.
ಪುರಸಭೆ ಅಧ್ಯಕ್ಷ ಶೇಖಣ್ಣ ಮಾತನಾಡಿ ಸಮಾಜದಲ್ಲಿ ಶಿಕ್ಷಕರಿಗೆ ವಿಶೇಷ ಸ್ಥಾನವಿದ್ದು, ಆಂತರಿಕ ಭಿನ್ನಾಭಿಪ್ರಾಯಗಳ ಮೂಲಕ ಅದಕ್ಕೆ ಧಕ್ಕೆ ತರದೆ ಮಕ್ಕಳಿಗೆ ಮಾದರಿಯಾಗಬೇಕು. ಶಾಲೆಗೆ ಅಗತ್ಯ ಸೌಲಭ್ಯ ಕಲ್ಪಿಸಲು ಡಿಎಂಎಫ್ ಅನುದಾನ ಕೋರಿ ಜಿಲ್ಲಾಧಿಕಾರಿಗೆ ಕ್ರಿಯಾ ಯೋಜನೆ ಕಳಿಸಲಾಗಿದೆ ಎಂದರು.
ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ನಿಂಗಪ್ಪ ಮಾತನಾಡಿ, 18 ಕ್ಲಸ್ಟರ್‌ಗಳ ವಿದ್ಯಾರ್ಥಿಗಳು ಕಲೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಅನುದಾನದ ಕೊರತೆ ನಡುವೆಯೂ ಶಿಕ್ಷಕರು ಸ್ವಂತ ಖರ್ಚಿನಲ್ಲಿ ಮಕ್ಕಳಿಗೆ ವಿವಿಧ ಉಡುಗೆ, ತೊಡುಗೆ ಮೂಲಕ ಸಿಂಗರಿಸಿ ಸ್ಪರ್ಧೆಗೆ ಸಿದ್ಧಗೊಳಿಸುತ್ತಿದ್ದಾರೆ. ಹೀಗಾಗಿ ಮಕ್ಕಳು ಪ್ರತಿಭೆ ಮೂಲಕ ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಬೇಕು ಎಂದರು.