ಗೋದಾಮುಗಳು ಸ್ವಚ್ಛವಾಗಿಡಿ

ಬಳ್ಳಾರಿಯ ಡಿಸಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಟಾಸ್ಕ್ ಫೋರ್ಸ ಸಮಿತಿ ಸಭೆಯಲ್ಲಿ ಡಿಸಿ ಕೆ.ನಾಗೇಂದ್ರ ಪ್ರಸಾದ್ ಮಾತನಾಡಿದರು. ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕ ಓಂಕಾರಯ್ಯ, ಕೃಷಿ ಜಂಟಿ ನಿರ್ದೇಶಕ ಸೋಮಸುಂದರ್, ಸಹಕಾರ ಇಲಾಖೆಯ ಉಪನಿಬಂಧಕ ವೀರಭದ್ರಯ್ಯ, ಕಾನೂನು ಮಾಪನ ಶಾಸ್ತ್ರ ಇಲಾಖೆಯ ನಿರೀಕ್ಷಕ ಮನೋಜ್ ಕುಮಾರ್ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಗೋದಾಮು
ಬಳ್ಳಾರಿ : ಕಡಲೆಕಾಳು ಖರೀದಿಗೆ ಬಳ್ಳಾರಿ ಮತ್ತು ಸಿರಗುಪ್ಪದಲ್ಲಿ ಖರೀದಿ ಕೇಂದ್ರ ಆರಂಭಿಸಬೇಕಾಗಿದ್ದು, ಖರೀದಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಗೋದಾಮು ಶುದ್ಧವಾಗಿಟ್ಟುಕೊಳ್ಳಬೇಕು ಎಂದು ಕೆ.ನಾಗೇಂದ್ರ ಪ್ರಸಾದ್ ಹೇಳಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಹಿಂಗಾರು ಹಂಗಾಮಿನ ಕಡಲೆಕಾಳು ಉತ್ಪನ್ನ ಖರೀದಿಸುವ ಮತ್ತು ಖರೀದಿ ಕೇಂದ್ರಗಳನ್ನು ಆರಂಭಿಸುವ ಕುರಿತು ಮಂಗಳವಾರ ಆಯೋಜಿಸಿದ್ದ ಜಿಲ್ಲಾ ಟಾಸ್ಕ್ ಫೋರ್ಸ ಸಮಿತಿ ಸಭೆಯಲ್ಲಿ ಮಾತನಾಡಿದರು. ಪ್ರಸಕ್ತ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್ ಗೆ 5,875 ರೂ. ದಂತೆ ಫ್ರೂಟ್ಸ್ ತಂತ್ರಾಂಶದಲ್ಲಿ ನೊಂದಣಿಯಾಗಿರುವ ರೈತರಿಂದ ಕಡಲೆಕಾಳು ಬೆಳೆದ ವಿಸ್ತೀರ್ಣಕ್ಕೆ ಅನುಗುಣವಾಗಿ ಉತ್ಪನ್ನ ಖರೀದಿಸಲಾಗುತ್ತದೆ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಖರೀದಿ ಏಜೆನ್ಸಿಯಾಗಿದೆ. ಮೂಲಭೂತ ಸೌಕರ್ಯವುಳ್ಳ ಖರೀದಿ ಕೇಂದ್ರಗಳ ಸ್ಥಾಪನೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.
ತೂಕ ಪ್ರಮಾಣೀಕತೆ ಸೇರಿದಂತೆ ಬೇಕಾದ ಎಲ್ಲ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ರೈತರ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಫೆ.12 ರಿಂದ ಮೇ.2 ವರೆಗೆ ಉತ್ಪನ್ನ ಖರೀದಿಸಲು ಅವಧಿ ನಿಗದಿಗೊಳಿಸಲಾಗಿದೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net