ಚಿತ್ರದುರ್ಗದಲ್ಲಿ ಮೇ 9ರಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಬೃಹತ್ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಯಡಿಯೂರಪ್ಪ ಅವರು ಸಮಾರಂಭ ಬೇಡವೆಂದರೂ, ಪಕ್ಷಕ್ಕಾಗಿ ಅವರು ಸಲ್ಲಿಸಿದ ಸೇವೆ ಪರಿಗಣಿಸಿ ಅಭಿಮಾನಿಗಳ ಒತ್ತಾಯಪೂರ್ವಕವಾಗಿ ಈ ಕಾರ್ಯಕ್ರಮ ಮಾಡುತ್ತಿದ್ದೇವೆ. ಈ ಸಮಾರಂಭಕ್ಕೆ ಕೇಂದ್ರ ಸಚಿವ ಅಮಿತ್ ಷಾ ಆಗಮಿಸಲಿದ್ದು, ಸುಮಾರು 10 ಲಕ್ಷ ಜನರು ಸೇರಲಿದ್ದಾರೆ. ಇದು ಪಕ್ಷದ ಕಾರ್ಯಕ್ರಮಕ್ಕಿಂತ ಹೆಚ್ಚಾಗಿ ಯಡಿಯೂರಪ್ಪ ಅವರ ಅಭಿಮಾನಿಗಳದಿಂದ ನಡೆಯುವ ಸಮಾರಂಭವಾಗಿದೆ ಎಂದರು.