ನಡೆದಾಡುವ ದೇವರು ಎಂದು ಪ್ರಸಿದ್ಧಿ

ಡಾ.ಶಿವಕುಮಾರ ಸ್ವಾಮೀಜಿ ಪುಣ್ಯಸ್ಮರಣೆ ಪ್ರಯುಕ್ತ ಸಿರಗುಪ್ಪದ ಚಾಣಕನೂರು ಕ್ರಾಸ್ ಹತ್ತಿರ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ರಕ್ತದಾನಿಗೆ  ಹಾಲ್ವಿ ಚರಣಗಿರಿ ಮಠದ ಅಭಿನವ ಮಹಾಂತ ಸ್ವಾಮೀಜಿ ಪ್ರಮಾಣಪತ್ರ ನೀಡಿದರು.
ಡಾ.ಶಿವಕುಮಾರ ಸ್ವಾಮೀಜಿ ಪುಣ್ಯಸ್ಮರಣೆ ಪ್ರಯುಕ್ತ ಸಿರಗುಪ್ಪದ ಚಾಣಕನೂರು ಕ್ರಾಸ್ ಹತ್ತಿರ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ರಕ್ತದಾನಿಗೆ ಹಾಲ್ವಿ ಚರಣಗಿರಿ ಮಠದ ಅಭಿನವ ಮಹಾಂತ ಸ್ವಾಮೀಜಿ ಪ್ರಮಾಣಪತ್ರ ನೀಡಿದರು.
Published on
ಸಿರಗುಪ್ಪ: ಡಾ.ಶಿವಕುಮಾರ ಸ್ವಾಮೀಜಿ ಅನ್ನ, ಅಕ್ಷರ ಮತ್ತು ಆಶ್ರಯ ದಾಸೋಹದ ಮೂಲಕ ಲಕ್ಷಾಂತರ ಬಡ ಮಕ್ಕಳಿಗೆ ಜೀವನವನ್ನು ಕಟ್ಟಿಕೊಳ್ಳಲು ನೆರವಾಗಿದ್ದರು ಎಂದು ಹಾಲ್ವಿ ಚರಣಗಿರಿ ಮಠದ ಅಭಿನವ ಮಹಾಂತ ಸ್ವಾಮೀಜಿ ಹೇಳಿದರು.
ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಪುಣ್ಯಸ್ಮರಣೆ, ದಾಸೋಹ ದಿನ, ಹಾಲ್ವಿ ಚರಣಗಿರಿ ಮಠದ ಅಭಿನವ ಮಹಾಂತ ಸ್ವಾಮೀಜಿ ಜನ್ಮದಿನ ಮತ್ತು 124ನೇ ತುಲಾಭಾರ ಕಾರ್ಯಕ್ರಮ ಅಂಗವಾಗಿ ಪಟ್ಟಣದ ಚಾಣಕನೂರು ಕ್ರಾಸ್‌ನಲ್ಲಿ ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳಿಂದ ಆಯೋಜಿಸಿದ್ದ ದಾಸೋಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸಿದ್ಧಗಂಗಾ ಶಿಕ್ಷಣ ಸಂಸ್ಥೆಯ ಮೂಲಕ ಉಚಿತ ಶಿಕ್ಷಣ ಮತ್ತು ಆಶ್ರಯ ನೀಡಿದ್ದರಿಂದ ಅವರು ನಡೆದಾಡುವ ದೇವರು ಎಂದು ಪ್ರಸಿದ್ಧಿ ಹೊಂದಿದ್ದರು ಎಂದು ಹೇಳಿದರು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ಡಾ.ಶಿವಕುಮಾರ ಸ್ವಾಮೀಜಿ ಜೀವನ ಚರಿತ್ರೆ ತಿಳಿಸಿದರು.
ಹಚ್ಚೊಳ್ಳಿ ಮತ್ತು ಚಾಣಕನೂರು ಕ್ರಾಸ್ ಹತ್ತಿರ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಕೌತಳ ಅಯ್ಯಪ್ಪ ಕಟ್ಟಡದ ಮೈದಾನದಲ್ಲಿ ಗೆಳೆಯರ ಬಳಗ, ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳಿಂದ ದಾಸೋಹ ಏರ್ಪಡಿಸಲಾಗಿತ್ತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net