ಕೆಪಿಎಂಇ ನೋಂದಣಿ ಕಡ್ಡಾಯ

ಬಳ್ಳಾರಿಯ ಡಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಜಿಲ್ಲಾ ನೋಂದಣಿ ಹಾಗೂ ಕುಂದುಕೊರತೆಗಳ ಸಭೆಯಲ್ಲಿ  ಡಿಸಿ ನಾಗೇಂದ್ರ ಪ್ರಸಾದ್ ಕೆ., ಅಧಿಕಾರಿಗಳಿಂದ ಮಾಹಿತಿ ಪಡೆದರು. ಜಿಪಂ ಮಹಮ್ಮದ್ ಹ್ಯಾರಿಸ್ ಸುಮೈರ್, ಡಿಎಚ್‌ಒ ಡಾ.ವೈ.ರಮೇಶಬಾಬು ಇತರರಿದ್ದರು.
ಬಳ್ಳಾರಿಯ ಡಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಜಿಲ್ಲಾ ನೋಂದಣಿ ಹಾಗೂ ಕುಂದುಕೊರತೆಗಳ ಸಭೆಯಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ., ಅಧಿಕಾರಿಗಳಿಂದ ಮಾಹಿತಿ ಪಡೆದರು. ಜಿಪಂ ಮಹಮ್ಮದ್ ಹ್ಯಾರಿಸ್ ಸುಮೈರ್, ಡಿಎಚ್‌ಒ ಡಾ.ವೈ.ರಮೇಶಬಾಬು ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ನೋಂದಣಿ
ಬಳ್ಳಾರಿ : ಜಿಲ್ಲೆಯಲ್ಲಿ ವೈದ್ಯರು ಕ್ಲಿನಿಕ್, ಪಾಲಿ ಕ್ಲಿನಿಕ್, ನರ್ಸಿಂಗ್ ಹೋಮ್ ಅಥವಾ ಲ್ಯಾಬ್ ಆರಂಭಿಸುವ ಮುನ್ನ ಜಿಲ್ಲಾಡಳಿತದಿಂದ ಕಡ್ಡಾಯವಾಗಿ ಕೆಪಿಎಂಇ ನೋಂದಣಿ ಪ್ರಮಾಣಪತ್ರ ಪಡೆಯಬೇಕು ಎಂದು ಡಿಸಿ ನಾಗೇಂದ್ರ ಪ್ರಸಾದ್ ಕೆ. ಹೇಳಿದರು.
ನಗರದ ಡಿಸಿ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾ ನೋಂದಣಿ ಹಾಗೂ ಕುಂದುಕೊರತೆಗಳ ಸಭೆಯಲ್ಲಿ ಮಾತನಾಡಿದರು. ನೋಂದಣಿ ಮಾಡಿಕೊಳ್ಳದೆ ನಿಯಮ ಉಲ್ಲಂಘಿಸಿದರೆ ಅಂತಹ ಕೇಂದ್ರಗಳಿಗೆ ವರ್ಷಕ್ಕೆ 25 ಸಾವಿರ ರೂ. ದಂಡ ವಿಧಿಸಿ ಹಾಗೂ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.
ಮನೆ ಅಥವಾ ಮಳಿಗೆಗಳನ್ನು ಆಸ್ಪತ್ರೆ, ಕ್ಲಿನಿಕ್ ಅಥವಾ ಲ್ಯಾಬ್‌ಗಳಿಗೆ ಬಾಡಿಗೆ ನೀಡುವ ಮುನ್ನ ಮಾಲೀಕರು ಗಮನ ಹರಿಸಬೇಕು. ಬಾಡಿಗೆದಾರರ ಅಧಿಕೃತ ವೈದ್ಯಕೀಯ ಪ್ರಮಾಣಪತ್ರಗಳನ್ನು ಪರಿಶೀಲಿಸಿದ ನಂತರವೇ ಬಾಡಿಗೆ ಒಪ್ಪಂದ ಮಾಡಿಕೊಳ್ಳಬೇಕು ಎಂದು ಕಟ್ಟಡ ಮಾಲೀಕರಿಗೆ ಸೂಚಿಸಿದರು.
====
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net