ವಾತ್ಸಲ್ಯ ಹೆಸರಿನಲ್ಲಿ ನಿರ್ಗತಿಕರಿಗೆ ಸೂರು

ಕುರುಗೋಡಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಮ್ಮಿಕೊಂಡಿದ್ದ ಮನೆ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಯೋಜನಾ ನಿರ್ದೇಶಕ ರೋಹಿತಾಕ್ಷ ಚಾಲನೆ ನೀಡಿದರು. ಪುರಸಭೆ ಅಧ್ಯಕ್ಷ ಟಿ.ಶೇಖಣ್ಣ, ಉಪಾಧ್ಯಕ್ಷ ಚನ್ನಪಟ್ಟಣ ಮಲ್ಲಿಕಾರ್ಜುನ,  ವಿಎಸ್‌ಎಸ್‌ಎನ್ ಅಧ್ಯಕ್ಷ ಎನ್.ಹುಲುಗಪ್ಪ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಎ.ವಾಗೀಶ್, ಸಿ.ಷಣ್ಮುಖ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ವಾತ್ಸಲ್ಯ

ವಾತ್ಸಲ್ಯ ಹೆಸರಿನಲ್ಲಿ ನಿರ್ಗತಿಕರಿಗೆ ಸೂರು

ಜಿಲ್ಲಾ ಯೋಜನಾ ನಿರ್ದೇಶಕ ರೋಹಿತಾಕ್ಷ ಮಾಹಿತಿ

ಕುರುಗೋಡು: ರಾಜ್ಯದ 796 ನಿರ್ಗತಿಕ ಮಹಿಳೆಯರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾತ್ಸಲ್ಯ ಹೆಸರಿನಲ್ಲಿ ಸೂರು ಕಲ್ಪಿಸಲಾಗಿದೆ ಎಂದು ಜಿಲ್ಲಾ ಯೋಜನಾ ನಿರ್ದೇಶಕ ರೋಹಿತಾಕ್ಷ ಹೇಳಿದರು.
ಪಟ್ಟಣದ 5ನೇ ವಾರ್ಡ್‌ನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಗುರುವಾರ ಹಮ್ಮಿಕೊಳ್ಳಲಾಗಿದ್ದ ಮನೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಸಂಸ್ಥೆಯು ನಿರ್ಗತಿಕ ಮಹಿಳೆಯರಿಗೆ ಮಾಸಾಶನ, ಸ್ವಸಹಾಯ ಗುಂಪಿನ ಮಹಿಳೆಯರ ಮಕ್ಕಳು ತಾಂತ್ರಿಕ ಶಿಕ್ಷಣ ಪಡೆಯುತ್ತಿದ್ದರೆ ಅಂತಹವರಿಗೆ ಮಾಸಿಕ ವಿದ್ಯಾರ್ಥಿ ವೇತನ ನೀಡುವ ಯೋಜನೆ ಜಾರಿಯಲ್ಲಿವೆ. ಸಮಾಜದ ಸ್ವಾಸ್ಥ್ಯ ಕಾಪಾಡುವ ಉದ್ದೇಶದಿಂದ ಮದ್ಯವರ್ಜನ ಶಿಬಿರ ಆಯೋಜಿಸಿ ಕುಡಿತ ಬಿಡಿಸುವ ಕಾರ್ಯ ಮಾಡುತ್ತಿದೆ. ಶಿಕ್ಷಕರ ಕೊರತೆ ಎದುರಿಸುತ್ತಿರುವ ಸರ್ಕಾರಿ ಶಾಲೆಗೆ ಅತಿಥಿ ಶಿಕ್ಷಕರನ್ನು ನೇಮಿಸುತ್ತಿದೆ ಎಂದರು.
ಪುರಸಭೆ ಅಧ್ಯಕ್ಷ ಟಿ.ಶೇಖಣ್ಣ, ಉಪಾಧ್ಯಕ್ಷ ಚನ್ನಪಟ್ಟಣ ಮಲ್ಲಿಕಾರ್ಜುನ, ವಿಎಸ್‌ಎಸ್‌ಎನ್ ಅಧ್ಯಕ್ಷ ಎನ್.ಹುಲುಗಪ್ಪ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಎ.ವಾಗೀಶ್ ಮತ್ತು ಸಿ.ಷಣ್ಮುಖ, ತಾಲೂಕು ಯೋಜನಾಧಿಕಾರಿ ಎಲ್.ರಾಘವೇಂದ್ರ, ಒಕ್ಕೂಟದ ಅಧ್ಯಕ್ಷೆ ಮಾಧವಿ, ಪ್ರಭು, ಮಹಾಂತೇಶ್, ರೇಖಾ, ಸ್ವಾತಿ, ಸಿ.ಅನುಷಾ, ಮುಖಂಡ ಬಸವರಾಜ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net