ಆತ್ಮವಿಶ್ವಾಸ ಹೆಚ್ಚಿಸಲಿದೆ ಪ್ರತಿಭಾ ಕಾರಂಜಿ

ಕುರುಗೋಡು ತಾಲೂಕಿನ ಯಲ್ಲಾಪುರದಲ್ಲಿ ಆಯೋಜಿಸಿದ್ದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿ ಜಡೇಶ್ ಉದ್ಘಾಟಿಸಿದರು., ಪಿಎಸ್‌ಐ ಸುಪ್ರೀತ್ ವಿರೂಪಾಕ್ಷಪ್ಪ, ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಲಿಂಗಪ್ಪ, ಪುರಸಭೆ ಅಧ್ಯಕ್ಷ ಶೇಖಣ್ಣ, ಸದಸ್ಯರಾದ ಜಯಶ್ರೀ, ಜಡೆಯ್ಯಸ್ವಾಮಿ ಇತರರಿದ್ದರು.

Published on
ಆತ್ಮವಿಶ್ವಾಸ ಹೆಚ್ಚಿಸಲಿದೆ ಪ್ರತಿಭಾ ಕಾರಂಜಿ

ಸಂಪನ್ಮೂಲ ವ್ಯಕ್ತಿ ಜಡೇಶ್ ಅಭಿಪ್ರಾಯ

ಕುರುಗೋಡು: ಜನಪದ ಕಲೆ ಮತ್ತು ಸಂಸ್ಕೃತಿ ಉಳಿವಿಗೆ ಪ್ರತಿಭಾ ಕಾರಂಜಿ ಪೂರಕವಾಗಿದ್ದು, ವಿದ್ಯಾರ್ಥಿಗಳು ಭಾಗವಹಿಸುವ ಮೂಲಕ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಂಪನ್ಮೂಲ ವ್ಯಕ್ತಿ ಜಡೇಶ್ ಹೇಳಿದರು.
ಯಲ್ಲಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದಲ್ಲಿ ಮಾತನಾಡಿದರು.
ಮಕ್ಕಳ ಭವಿಷ್ಯಕ್ಕೆ ಕಾರ್ಯಕ್ರಮ ಉತ್ತಮ ಅಡಿಪಾಯವಾಗಿರುವುದರೊಂದಿಗೆ ಗ್ರಾಮೀಣ ಮಕ್ಕಳ ಆತ್ಮವಿಶ್ವಾಸ ಹೆಚ್ಚಿಸಿ ಸಾಧನೆಗೆ ಪ್ರೇರಣೆಯಾಗಲಿದೆ ಎಂದರು.
ಪಿಎಸ್‌ಐ ಸುಪ್ರೀತ್ ವಿರೂಪಾಕ್ಷಪ್ಪ ಮಾತನಾಡಿ, ಸರ್ಕಾರ ಮಕ್ಕಳ ಕಲಿಕೆಗೆ ಸಾಕಷ್ಟು ಯೋಜನೆಗಳನ್ನು ರೂಪಿಸಿದೆ. ಪ್ರತಿಯೊಬ್ಬರೂ ಪ್ರಯೋಜನ ಪಡೆಯಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಲಿಂಗಪ್ಪ, ಪುರಸಭೆ ಅಧ್ಯಕ್ಷ ಶೇಖಣ್ಣ, ಸದಸ್ಯರಾದ ಜಯಶ್ರೀ, ಜಡೆಯ್ಯಸ್ವಾಮಿ, ಎಸ್ಡಿಎಂಸಿ ಅಧ್ಯಕ್ಷ ಪ್ರಕಾಶ್, ಮುಖ್ಯಶಿಕ್ಷಕ ತುಕಾರಾಮ್ ಗೊರವ, ಗುಂಡಪ್ಪನವರ ನಾಗರಾಜ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net