ಪ್ರತಿಯೊಬ್ಬರೂ ಶಿಬಿರದ ಪ್ರಯೋಜನ ಪಡೆಯಲಿ

ಕುರುಗೋಡು ಸಮೀಪದ ಕುಡುತಿನಿ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ನಮ್ಮ ಕರ್ನಾಟಕ ಸೇನೆ ಹಾಗೂ ನಮ್ಮ ಕರ್ನಾಟಕ ನರ್ಸಿಂಗ್ ಹೋಂ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಜಿಲ್ಲಾಧ್ಯಕ್ಷ ಬಾವಿ ಶಿವಕುಮಾರ, ಉಪಾಧ್ಯಕ್ಷ ತಿಮ್ಮಪ್ಪ, ಮುಖಂಡ ತಳಿಕೇರಿ ಭೀಮಯ್ಯ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಆರೋಗ್ಯ
  • ಉಚಿತ
  • ತಪಾಸಣಾ
ಕುರುಗೋಡು: ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಆರೋಗ್ಯ ಉಚಿತ ತಪಾಸಣಾ ಶಿಬಿರಗಳು ಸಹಕಾರಿಯಾಗಿವೆ ಎಂದು ನಮ್ಮ ಕರ್ನಾಟಕ ಸೇನೆ ಜಿಲ್ಲಾಧ್ಯಕ್ಷ ಶಿವಕುಮಾರ್ ಹೇಳಿದರು.
ಸಮೀಪದ ಕುಡುತಿನಿ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ನಮ್ಮ ಕರ್ನಾಟಕ ಸೇನೆ ಹಾಗೂ ನಮ್ಮ ಕರ್ನಾಟಕ ನರ್ಸಿಂಗ್ ಹೋಂ ವತಿಯಿಂದ ಶನಿವಾರ ಆಯೋಜಿಸಿದ್ದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.
ಹಿಂದೆ ವಾಂತಿ-ಭೇದಿ, ಟೈಫಾಯಿಡ್, ಕ್ಷಯ, ಕಾಲಾರದಂತಹ ರೋಗಗಳು ಸಾಮಾನ್ಯವಾಗಿದ್ದವು. ಆದರೆ ಪ್ರಸ್ತುತ ಪ್ರತಿಯೊಬ್ಬರಿಗೂ ಬಿಪಿ, ಶುಗರ್, ಹೃದ್ರೋಗ ಹಾಗೂ ಕಿಡ್ನಿ ಕಾಯಿಲೆ ಸಾಮಾನ್ಯವಾಗಿವೆ. ಬಡವರು ಆರ್ಥಿಕವಾಗಿ ಚಿಕಿತ್ಸಾ ವೆಚ್ಚ ಭರಿಸಲು ಕಷ್ಟ. ಹೀಗಾಗಿ ಆರೋಗ್ಯ ಶಿಬಿರದ ಪ್ರಯೋಜನವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net