ಬಳ್ಳಾರಿಯ ಸಂತ ಜಾನ ಪ್ರೌಢಶಾಲಾ ಸಭಾಂಗಣದಲ್ಲಿ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದಿಂದ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮವನ್ನು ಡಿಡಿಪಿಐ ಜೆ.ಎಂ. ತಿಪ್ಪೇಸ್ವಾಮಿ ಉದ್ಘಾಟಿಸಿದರು. ಎಂಎಲ್ಸಿ ಶಶೀಲ್ ಜಿ.ನಮೋಶಿ, ಸಂಘದ ಜಿಲ್ಲಾಧ್ಯಕ್ಷ ಜಿ.ಭಾಸ್ಕರರೆಡ್ಡಿ, ಬಿಇಒ ಟಿ.ಎಂ. ಸಿದ್ದಲಿಂಗಮೂರ್ತಿ, ಫಾದರ್ ಫ್ರಾನ್ಸಿಸ್, ಮುಖ್ಯಗುರು ಶಾಂತ ಶೀಲನ್ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಶಿಕ್ಷಕರ ಹುದ್ದೆಗಳ ಭರ್ತಿ
ಪ್ರಗತಿಗೆ ಸರ್ಕಾರ ವಿಶೇಷ ಒತ್ತು
ಬಳ್ಳಾರಿ : ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪ್ರೌಢಶಾಲಾ ಸಹ ಶಿಕ್ಷಕರ ಕೊಡುಗೆ ಅಪಾರವಾಗಿದೆ ಎಂದು ಡಿಡಿಪಿಐ ಜೆ.ಎಂ.ತಿಪ್ಪೇಸ್ವಾಮಿ ಹೇಳಿದರು.
ನಗರದ ಕೋಟೆಯ ಪ್ರದೇಶದ ಸಂತ ಜಾನ ಪ್ರೌಢಶಾಲಾ ಸಭಾಂಗಣದಲ್ಲಿ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದಿಂದ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಜಿಲ್ಲೆಯ 17 ವಿದ್ಯಾರ್ಥಿಗಳಿಗೆ ಹಾಗೂ ಶೇ. 100ರಷ್ಟು ಫಲಿತಾಂಶ ದಾಖಲಿಸಿದ 34 ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಗಳ ಮುಖ್ಯಗುರುಗಳು ಹಾಗೂ ಸಹ ಶಿಕ್ಷಕರಿಗೆ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಒಂದ ರಿಂದ ಎಂಟನೇ ತರಗತಿಯವರೆಗೆ ಅನುತ್ತೀರ್ಣ ಪದ್ಧತಿ ಇಲ್ಲದಿರುವುದು ಸಹ ಫಲಿತಾಂಶದ ಹಿನ್ನೆಡೆಗೆ ಕಾರಣವಾಗುತ್ತಿದೆ. ಪ್ರೌಢಶಾಲಾ ಶಿಕ್ಷಕರು ಕಲಿಕೆಯನ್ನು ವರ್ಣಮಾಲೆಯಿಂದಲೇ ಪ್ರಾರಂಭಿಸಬೇಕಾದ ಅನಿವಾರ್ಯತೆ ಇದೆ ಎಂದರು.
ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿ ಹಾಗೂ ಶಾಲೆಗಳ ಭೌತಿಕ ಪ್ರಗತಿಗೆ ಸರ್ಕಾರ ವಿಶೇಷ ಒತ್ತು ನೀಡಬೇಕು ಎಂದು ಒತ್ತಾಯಿಸಿದರು. ಬಳಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ, ಮುಖ್ಯಗುರುಗಳು ಹಾಗೂ ಸಹ ಶಿಕ್ಷಕರಿಗೆ ಸನ್ಮಾನಿಸಿ ಗೌರವಿಸಲಾಯಿತು.