ಬೂತ್‌ಮಟ್ಟದಲ್ಲಿ ಬಿಜೆಪಿ ಸಂಘಟನೆಯಾಗಲಿ

ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗದಲ್ಲಿ ಆಯೋಜಿಸಿದ್ದ ಬಿಜೆಪಿ ಕಾರ್ಯಕರ್ತರ ಸಂಘಟನಾ ಸಭೆಯಲ್ಲಿ ಜಗಳೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಮಂಡಲ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. ಮಾಜಿ ಶಾಸಕ ಎಸ್.ವಿ.ರಾಮಚಂದ್ರಪ್ಪ, ಮಂಡಲ ಉಪಾಧ್ಯಕ್ಷ ಪ್ರಶಾಂತ ಪಾಟೀಲ್, ಪ್ರಧಾನ ಕಾರ್ಯದರ್ಶಿ ಕಮ್ಮತ್ತಹಳ್ಳಿ ಮುರುಗೇಶ್, ಧರ್ಮಾನಾಯ್ಕ, ಪಿ.ಕೆಂಚನಗೌಡ ಇತರರಿದ್ದರು.

Published on
ಹರಪನಹಳ್ಳಿ: ಮುಂಬರುವ ಗ್ರಾಮ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಸನ್ನದ್ಧರಾಗೋಣ. ಇದಕ್ಕಾಗಿ ಬೂತ್‌ಮಟ್ಟದಲ್ಲಿ ಪಕ್ಷದ ಸಂಘಟನೆ ಆಗಬೇಕಿದೆ ಎಂದು ಜಗಳೂರು ಮಾಜಿ ಶಾಸಕ ಎಸ್.ವಿ.ರಾಮಚಂದ್ರಪ್ಪ ತಿಳಿಸಿದರು.
ಉಚ್ಚಂಗಿದುರ್ಗ ಗ್ರಾಮದ ಹಾಲಮ್ಮನ ತೋಪಿನಲ್ಲಿ ಬಿಜೆಪಿ ಕಾರ್ಯಕರ್ತರ ಸಂಘಟನಾ ಸಭೆ ಅಧ್ಯಕ್ಷತೆ ವಹಿಸಿ ಸೋಮವಾರ ಮಾತನಾಡಿದರು. ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಬೇವಿನಹಳ್ಳಿ ಕೆಂಚನಗೌಡ ಮಾತನಾಡಿ, ಪಕ್ಷದಲ್ಲಿನ ಆಂತರಿಕ ಗೊಂದಲಗಳನ್ನು ಸರಿಪಡಿಸಿಕೊಂಡು ಸಂಘಟನೆ ಮಾಡಬೇಕು ಮತ್ತು ಪಕ್ಷದ ಶಿಸ್ತನ್ನು ಎಲ್ಲರೂ ಪಾಲಿಸಬೇಕು ಎಂದರು.
ಜಗಳೂರು ಕ್ಷೇತ್ರದ ಮಂಡಲ ಉಪಾಧ್ಯಕ್ಷ ಪ್ರಶಾಂತ ಪಾಟೀಲ್ ಮಾತನಾಡಿ, ಜಗಳೂರು ವಿಧಾನಸಭೆ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ತಾಲೂಕಿನ ಏಳು ಗ್ರಾಮ ಪಂಚಾಯಿತಿಗಳು ಅಭಿವೃದ್ಧಿಯಲ್ಲಿ ಕುಂಠಿತಗೊಂಡಿವೆ, ರಾಮಚಂದ್ರಪ್ಪ ಅವರ ಅವಧಿಯಲ್ಲಿ ನಿರ್ಮಿಸಲಾದ ಕಟ್ಟಡಗಳಿಗೆ ಸುಣ್ಣ-ಬಣ್ಣ ಬಳಿಸಲು ಸಾಧ್ಯವಾಗಿಲ್ಲ. ಕಳೆದ ಬಾರಿ ಬಿಜೆಪಿ ಆಂತರಿಕ ಬಿಕ್ಕಟ್ಟಿನಿಂದ ಕಾರ್ಯಕರ್ತರೇ ನಮ್ಮ ಅಭ್ಯರ್ಥಿಯನ್ನು ಸೋಲಿಸಿದ್ದಾರೆ ಎಂದರು.
ಪ್ರಮುಖರಾದ ಕೆ.ಎಂ.ಮಂಜುನಾಥಯ್ಯ ತೌಡೂರು, ಜಿಪಂ ಮಾಜಿ ಉಪಾಧ್ಯಕ್ಷ ಯರಬಳ್ಳಿ ಡಿ.ಸಿದ್ದಪ್ಪ, ಪುಣಭಘಟ್ಟ ಬಸವನಗೌಡ, ನಿವೃತ್ತ ಶಿಕ್ಷಕ ಶರಣಪ್ಪ, ಜಾತಪ್ಪ, ರಾಮಚಂದ್ರಪ್ಪ, ಯಶೋಧರ್ ನಾಯ್ಕ, ಕವಲಹಳ್ಳಿ ಭರಮಪ್ಪ, ಸಿದ್ದಣ್ಣ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net