ಪಟ್ಟಣದಲ್ಲಿ ದೈವಜ್ಞ ಬ್ರಾಹ್ಮಣ ಸಮಾಜದಿಂದ ಆಯೋಜಿಸಿದ್ದ ಧರ್ಮ ಜಾಗೃತಿ ಸಭೆಯ ಸಾನ್ನಿಧ್ಯ ವಹಿಸಿ ಭಾನುವಾರ ಮಾತನಾಡಿದರು. ದೈವಜ್ಞ ಬ್ರಾಹ್ಮಣ ಸಮುದಾಯದವರು ಸಂಘಟಿತರಾಗಬೇಕಿದೆ. ಈ ದಿಸೆಯಲ್ಲಿ ನಿರಂತರ ಮಠ ಮತ್ತು ಗುರುಗಳ ಸಂಪರ್ಕ ಇಟ್ಟುಕೊಂಡಿರಬೇಕು. ಸಮಾಜದ ಪ್ರಗತಿಗೆ ಎಲ್ಲರೂ ಕೈಜೋಡಿಸಬೇಕು. ಮಕ್ಕಳಿಗೆ ಬಾಲ್ಯದಲ್ಲಿಯೇ ದೈವಜ್ಞ ಬ್ರಾಹ್ಮಣ ಸಮುದಾಯದ ರೀತಿ ನೀತಿ, ಆಚಾರ ವಿಚಾರ, ಧಾರ್ಮಿಕ ಪ್ರಜ್ಞೆ, ಮಠದ ಪರಂಪರೆ ಕುರಿತು ಜಾಗೃತಿ ಮೂಡಿಸುವಂತೆ ಹೇಳಿದರು.