ಸರ್ಕಾರ ಮೂಲಸೌಕರ್ಯ ಕಲ್ಪಿಸಲಿ

ಬಳ್ಳಾರಿಯ ಡಿಸಿ ಕಚೇರಿ ಮುಂಭಾಗದಲ್ಲಿ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದಿಂದ ಪ್ರತಿಭಟನೆ ನಡೆಯಿತು. ಸಂಘದ ಜಿಲ್ಲಾಧ್ಯಕ್ಷೆ ಈರಮ್ಮ, ಪದಾಧಿಕಾರಿಗಳಾದ, ಮಾರಮ್ಮ, ಹುಲಿಗೆಮ್ಮ, ಎ.ಸ್ವಾಮಿ, ವೀರೇಶ್ ಇತರರಿದ್ದರು.
ಬಳ್ಳಾರಿಯ ಡಿಸಿ ಕಚೇರಿ ಮುಂಭಾಗದಲ್ಲಿ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದಿಂದ ಪ್ರತಿಭಟನೆ ನಡೆಯಿತು. ಸಂಘದ ಜಿಲ್ಲಾಧ್ಯಕ್ಷೆ ಈರಮ್ಮ, ಪದಾಧಿಕಾರಿಗಳಾದ, ಮಾರಮ್ಮ, ಹುಲಿಗೆಮ್ಮ, ಎ.ಸ್ವಾಮಿ, ವೀರೇಶ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ವಿಮೋಚನಾ
ಬಳ್ಳಾರಿ : ರಾಜ್ಯದಲ್ಲಿನ ವಿಮುಕ್ತ ದೇವದಾಸಿ ಮಹಿಳೆಯರಿಗೆ ಮೂಲಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ, ಇಲ್ಲಿನ ಡಿಸಿ ಕಚೇರಿ ಮುಂಭಾಗದಲ್ಲಿ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದಿಂದ ಸೋಮವಾರ ಪ್ರತಿಭಟನೆ ನಡೆಯಿತು.
ರಾಜ್ಯ ಸರ್ಕಾರ ಯಾವುದೇ ಷರತ್ತಿಲ್ಲದೆ, ವಯೋಮಿತಿ ಗಮನಿಸದೆ ಸರ್ವೇ ಮಾಡಬೇಕು. ಸರ್ವೇಯಿಂದ ಹೊರಹೋದ ದೇವದಾಸಿ ಮಹಿಳೆಯರ ಮಕ್ಕಳ ವಿದ್ಯಾಭ್ಯಾಸಕ್ಕೆ ತಾಯಿಯ ದೇವದಾಸಿ ದೃಢೀಕರಣ ಪತ್ರ ನೀಡಬೇಕು. ವಿಮುಕ್ತ ದೇವದಾಸಿಯರಿಗೆ ಎರಡು ಲಕ್ಷ ರೂ. ಸಹಾಯಧನ ನೀಡಬೇಕು. ಜಿಲ್ಲೆಯ ಎಲ್ಲ ದೇವದಾಸಿ ಮಹಿಳೆಯರಿಗೆ ಕೆಎಂಆರ್‌ಸಿ ಅನುದಾನದಿಂದ ನಿವೇಶನ ಒದಗಿಸಿ, 12 ಲಕ್ಷ ರೂ. ವೆಚ್ಚದಲ್ಲಿ ಮನೆಗಳನ್ನು ಉಚಿತವಾಗಿ ನಿರ್ಮಿಸಬೇಕು ಸೇರಿದಂತೆ ನಾನಾ ಬೇಡಿಕೆಗಳು ಈಡೇರಿಸುವಂತೆ ಒತ್ತಾಯಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net