ಸರ್ಕಾರ ನೇಮಕಾತಿ ಪ್ರಕ್ರಿಯೆ ಆರಂಭಿಸಲಿ

ಬಳ್ಳಾರಿಯ ನೂತನ ಡಿಸಿ ಕಚೇರಿ ಆವರಣದಲ್ಲಿ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಯಿತು.
ಬಳ್ಳಾರಿಯ ನೂತನ ಡಿಸಿ ಕಚೇರಿ ಆವರಣದಲ್ಲಿ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಯಿತು.
Published on

ಪ್ರಮುಖ ಮುಖ್ಯಾಂಶಗಳು

  • ನೇಮಕಾತಿ
ಬಳ್ಳಾರಿ : ರಾಜ್ಯ ಸರ್ಕಾರ ಕಳೆದ ಕೆಲ ತಿಂಗಳಿಂದ ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬ ಖಂಡಿಸಿ, ಇಲ್ಲಿನ ಡಿಸಿ ಕಚೇರಿ ಆವರಣದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ಗುರುವಾರ ಪ್ರತಿಭಟನೆ ನಡೆಯಿತು.
ಸಮಿತಿ ಜಿಲ್ಲಾ ಸಂಚಾಲಕ ಜಗದೀಶ ನೇಮಕಲ್ ಮಾತನಾಡಿ, ಕಳೆದ ವರ್ಷ ಸೆಪ್ಟೆಂಬರ್ ತಿಂಗಳಿಂದ ನೇಮಕಾತಿ ಸಂಬಂಧ ಸರ್ಕಾರಕ್ಕೆ ಹಲವು ಮನವಿ ಪತ್ರ ಸಲ್ಲಿಸಿದರೂ ಯಾವುದೇ ಪ್ರಕ್ರಿಯೆ ನಡೆಸದೆ ಕಾಲಹರಣ ಮಾಡುತ್ತಿದ್ದಾರೆ. ಉದ್ಯೋಗದ ಅಕಾಂಕ್ಷೆಯಲ್ಲಿರುವ ಯುವಕರು ದಿನೇದಿನೆ ವಿಳಂಬದಿಂದ ನಿರಾಶೆಗೊಳ್ಳುತ್ತಿದ್ದಾರೆ. ಆದ್ದರಿಂದ ಕೂಡಲೇ, ಆರ್ಥಿಕ ಇಲಾಖೆ ಅನುಮೋದನೆ ನೀಡಿರುವ 56,432 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಬೇಕು. ಜತೆಗೆ ಕೆಪಿಎಸ್‌ಸಿಯಲ್ಲಿ ಭ್ರಷ್ಟಾಚಾರ ಮುಕ್ತಗೊಳಿಸಬೇಕು ಎಂದು ಆಗ್ರಹಿಸಿದರು. ಬಳಿಕ ಡಿಸಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
=====
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net