ರಾಷ್ಟ್ರಮಟ್ಟದಲ್ಲಿ ಕಾಯ್ದೆ ಜಾರಿಯಾಗಲಿ

ಗೋ ಸಮ್ಮಾನ ಅಭಿಯಾನ ಅಂಗವಾಗಿ ಸಿರಗುಪ್ಪದಲ್ಲಿ ತಹಸೀಲ್ದಾರ್ ಗೌಸಿಯಾ ಬೇಗಂ ಅವರಿಗೆ ವಿವಿಧ ಹಿಂದೂ ಪರ ಸಂಘಟನೆಗಳ  ಪ್ರಮುಖರು ಮತ್ತು ಮಠಾಧೀಶರು ಮನವಿ ಸಲ್ಲಿಸಿದರು.
ಗೋ ಸಮ್ಮಾನ ಅಭಿಯಾನ ಅಂಗವಾಗಿ ಸಿರಗುಪ್ಪದಲ್ಲಿ ತಹಸೀಲ್ದಾರ್ ಗೌಸಿಯಾ ಬೇಗಂ ಅವರಿಗೆ ವಿವಿಧ ಹಿಂದೂ ಪರ ಸಂಘಟನೆಗಳ ಪ್ರಮುಖರು ಮತ್ತು ಮಠಾಧೀಶರು ಮನವಿ ಸಲ್ಲಿಸಿದರು.
Published on
ಸಿರಗುಪ್ಪ: ರಾಷ್ಟ್ರಮಟ್ಟದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಬೇಕೆಂದು ಒತ್ತಾಯಿಸಿ ಹಿಂದೂಪರ ಸಂಘಟನೆಗಳು ಮತ್ತು ವಿವಿಧ ಮಠಾಧೀಶರು ಗೋ ಸಮ್ಮಾನ ಅಭಿಯಾನದ ನಡೆಸುತ್ತಿರುವುದು ಉತ್ತಮ ಕಾರ್ಯವಾಗಿದೆ ಎಂದು ಗುರುಬಸವ ಮಠದ ಬಸವ ಭೂಷಣ ಸ್ವಾಮೀಜಿ ಹೇಳಿದರು.
ಪಟ್ಟಣದ ಕೆಇಬಿ ಗಣೇಶ ದೇವಸ್ಥಾನದ ಆವರಣದಲ್ಲಿ ತಾಲೂಕಿನ ವಿವಿಧ ಹಿಂದೂಪರ ಸಂಘಟನೆಗಳು ಹಮ್ಮಿಕೊಂಡಿದ್ದ ಗೋ ಸಮ್ಮಾನ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಗೋವುಗಳ ರಕ್ಷಣೆಗೆ ಗೋ ಹತ್ಯೆ ನಿಷೇಧ ಕಾಯ್ದೆ ಅನುಷ್ಠಾನವಾಗಲೇಬೇಕು. ಗೋ ಹತ್ಯೆ ನಿಷೇಧ ಕಾಯ್ದೆ 2021 ರಲ್ಲಿ ರಾಜ್ಯದಲ್ಲಿ ಜಾರಿಗೆ ಬಂದಿದ್ದು, ಇಲ್ಲಿವರೆಗೆ ಸಾವಿರಾರು ಜಾನುವಾರುಗಳನ್ನು ರಕ್ಷಿಸಲಾಗಿದೆ ಎಂದರು.
ರಾಷ್ಟ್ರಮಟ್ಟದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಗೋ ಸಮ್ಮಾನ ಮತ್ತು ಸಹಿ ಸಂಗ್ರಹ ಅಭಿಯಾನ ದೇಶದೆಲ್ಲೆಡೆ ನಡೆಯುತ್ತಿದ್ದು, ಈ ಅಭಿಯಾನಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಗೋ ಸನ್ಮಾನದ ಭಾಗವಾಗಿ ಗೋವುಗಳನ್ನು ರಾಷ್ಟ್ರಮಾತೆ ಎಂದು ಘೋಷಿಸುವುದು ಮತ್ತು ಗೋಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸಲು ಆಗ್ರಹಿಸಿ ದೇಶಾದ್ಯಂತ 5,400 ಕ್ಕೂ ಹೆಚ್ಚು ತಾಲೂಕುಗಳಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತಿದೆ ಎಂದು ಹೇಳಿದರು.
ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಗೌಸಿಯಾ ಬೇಗಂ ಅವರಿಗೆ ಮನವಿ ಸಲ್ಲಿಸಲಾಯಿತು. ಕೈವಲ್ಯಾನಂದ ಸ್ವಾಮೀಜಿ, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಎಂ.ಎಸ್ ಸಿದ್ದಪ್ಪ, ಹಿಂದೂಪರ ಸಂಘಟನೆಗಳ ಪ್ರಮುಖರಾದ ಚನ್ನಬಸವ, ವೇಮನಗೌಡ, ಗೋಪಿನಾಥ, ಕೆ.ನರಸಿಂಹ ಮೂರ್ತಿ, ಮಲ್ಲಿಕಾರ್ಜುನ ಸ್ವಾಮಿ, ಮಂಜುನಾಥ, ಶಿವಪ್ಪ, ವೀರನಗೌಡ ಇನ್ನಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net