ಕಪಗಲ್ ಗ್ರಾಮದಲ್ಲಿ ನರೇಗಾ ಕೂಲಿ ಕಾರ್ಮಿಕರಿಗಾಗಿ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ತಾಪಂ ಸಹಾಯಕ ನಿರ್ದೇಶಕಿ ದೀಪಾ ಅರಳಿಕಟ್ಟಿ ಮಾತನಾಡಿದರು. ಸಾಮುದಾಯಿಕ ಅರೋಗ್ಯ ಅಧಿಕಾರಿ ಹನುಮಂತಿ, ಪ್ರಾಥಮಿಕ ಸುರಕ್ಷ ಅಧಿಕಾರಿ ಶಿಲ್ಪಕಲಾ, ಐಇಸಿ ಸಂಯೋಜಕ ಈರೇಶ, ತಾಂತ್ರಿಕ ಸಂಯೋಜಕ ಚಿದಾನಂದ, ಬಿಎಫ್‌ಟಿ ಸಿದ್ದರಾಮ ಇತರರಿದ್ದರು.
ಮಾನ್ವಿ: ಉದ್ಯೋಗ ಖಾತ್ರಿ ಕೂಲಿ ಕಾರ್ಮಿಕರು ಉಚಿತ ಆರೋಗ್ಯ ತಪಾಸಣೆ ಶಿಬಿರಗಳನ್ನು ಬಳಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ತಾಪಂ ಸಹಾಯಕ ನಿರ್ದೇಶಕಿ ದೀಪಾ ಅರಳಿಕಟ್ಟಿ ಹೇಳಿದರು.
ಕಪಗಲ್ ಗ್ರಾಮದಲ್ಲಿ ಬುಧವಾರ ಗ್ರಾಪಂ ಹಾಗೂ ಆರೋಗ್ಯ ಇಲಾಖೆಯಿಂದ ಹಮ್ಮಿಕೊಂಡಿದ್ದ ಉಚಿತ ಅರೋಗ್ಯ ಶಿಬಿರದಲ್ಲಿ ಮಾತನಾಡಿದರು. ನರೇಗಾ ಕೂಲಿ ಕಾರ್ಮಿಕರಿಗೆ ಕಾಮಗಾರಿ ಸ್ಥಳದಲ್ಲಿಯೇ ಉಚಿತ ಆರೋಗ್ಯ ತಪಾಸಣೆ ಆರೋಗ್ಯ ಇಲಾಖೆಯಿಂದ ಮಾಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿದಲ್ಲಿ ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ತಜ್ಞ ವೈದ್ಯರಿಂದ ಚಿಕಿತ್ಸೆ ನೀಡಲಾಗುವುದು ಎಂದು ತಿಳಿಸಿದರು.
ಜಿಪಂ ಎಡಿಪಿಸಿ ಮಲ್ಲಮ್ಮ ಮಾತನಾಡಿ, ಸಾಮಾಜಿಕ ಭದ್ರತೆ ಕಲ್ಪಿಸಲು ನರೇಗಾ ಯೋಜನೆಯಡಿ 65ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು, ಅಂಗವಿಕಲರು ಹಾಗೂ ಗರ್ಭಿಣಿಯರಿಗೆ ಶೇ.50 ಕೆಲಸ ಮಾಡಿದರೂ ಪೂರ್ತಿ ಪ್ರಮಾಣದ ಕೂಲಿ ನೀಡಲಾಗುತ್ತದೆ. ಕಾರ್ಮಿಕರು ನಿರ್ವಹಿಸುವ ಕೆಲಸದ ಅಧಾರದ ಮೇಲೆ ಕೂಲಿ ನೀಡಲಾಗುವುದು. ಮೇಟಿಗಳು ಎನ್‌ಎಂಎಂಎಸ್ ತಂತ್ರಾಂಶದಲ್ಲಿ ಮುಖಚಹರೆ ಮೂಲಕ ಕಡ್ಡಾಯವಾಗಿ ಎರಡು ಸಲ ಹಾಜರಾತಿ ದಾಖಲಿಸಬೇಕು ಎಂದು ತಿಳಿಸಿದರು.