ಹೂವಿನಹಡಗಲಿ ಕೃಷಿ ಸಹಾಯಕ ನಿರ್ದೇಶಕ ಮಂಜುನಾಥ ಅವರಿಗೆ ರಾಜ್ಯ ರೈತಸಂಘದಿಂದ ಮನವಿ ಸಲ್ಲಿಸಲಾಯಿತು. ತಾಲೂಕು ಅಧ್ಯಕ್ಷ ಹೊಸಮನಿ ಸಿದ್ದಪ್ಪ, ತಾಲೂಕು ಪ್ರಧಾನ ಕಾರ್ಯದರ್ಶಿ ಶಿವರಾಜ, ಸಂಘಟನಾ ಕಾರ್ಯದರ್ಶಿ ಗಿರೀಶ, ಸಂಘಟನಾ ಸಹಕಾರ್ಯದರ್ಶಿ ದುರುಗಪ್ಪ, ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ವಿಜಯಲಕ್ಷ್ಮೀ ಜಿಲ್ಲಾ ಉಪಾಧ್ಯಕ್ಷ ಗನಿಸಾಬ್, ಪ್ರಮುಖರಾದ ಮಂಜುನಾಥ, ವೆಂಕಟೇಶ, ಕೊಟ್ರೇಶ್,ಗುರುಬಸವರಾಜ, ಮುಜುಬೂರ್ ರಹಿಮಾನ್ ಇತರರಿದ್ದರು.
ಹೂವಿನಹಡಗಲಿ: ಕಳಪೆ ಬಿತ್ತನೆ ಬೀಜ ಮಾರಾಟ ಮಾಡುವವರ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿ ರಾಜ್ಯ ರೈತಸಂಘದಿಂದ ಪಟ್ಟಣದ ಕೃಷಿ ಸಹಾಯಕ ನಿರ್ದೇಶಕ ಮಂಜುನಾಥ ಅವರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು.
ತಾಲೂಕು ಅಧ್ಯಕ್ಷ ಹೊಸಮನಿ ಸಿದ್ದಪ್ಪ ಮಾತನಾಡಿ, ಮುಂಗಾರು ಹಂಗಾಮಿನಲ್ಲಿ ರೈತರು ಬಿತ್ತನೆ ಕಾರ್ಯ ಆರಂಭಿಸಲು ಸಕಲ ಸಿದ್ಧತೆ ನಡೆಸುತ್ತಿದ್ದಾರೆ. ತಾಲೂಕಿನ ಎಲ್ಲ ರೈತ ಸಂಪರ್ಕ ಕೇಂದ್ರದಲ್ಲಿ ಸಕಾಲದಲ್ಲಿ ಬಿತ್ತನೆ ಬೀಜ ಸೇರಿದಂತೆ ರಸಗೊಬ್ಬರವನ್ನು ಇಲಾಖೆಯಿಂದ ಸಮರ್ಪಕವಾಗಿ ಪೂರೈಸಬೇಕು.
ಇನ್ನು ತಾಲೂಕಿನಲ್ಲಿ ಕಳಪೆ ಬಿತ್ತನೆ ಬೀಜ ಮಾರಾಟ ಮಾಡುವ ಮೂಲಕ ರೈತರಿಗೆ ವಂಚನೆ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದ್ದು ಇಂತಹವರ ವಿರುದ್ಧ ಸೂಕ್ತ ಕ್ರಮ ಜರುಗಿಸಿ ಘಟನೆ ಮರುಕಳಿಸದಂತೆ ಕ್ರಮ ವಹಿಸಬೇಕು ಎಂದರು.