ಸಿರಿಗೇರಿ: ಜನತಾ ಕಾಲನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ ಮಾಡಲಾಯಿತು.
ಮುಖ್ಯಶಿಕ್ಷಕ ಬಿ.ಆರ್.ಶಿವಕುಮಾರ ಮಾತನಾಡಿ, ಅಪ್ಪಣ್ಣ ಅವರು ಬಸವಣ್ಣ ಅವರ ಆಪ್ತ ಕಾರ್ಯದರ್ಶಿಯಾಗಿ ನಿಷ್ಠೆ, ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದ್ದಾರೆ. 200 ಹೆಚ್ಚು ವಚನಗಳನ್ನು ರಚಿಸಿ ಸಮಾಜಕ್ಕೆ ಕೊಡುಗೆ ನೀಡಿದ್ದಾರೆ. ಈ ವಚನಗಳನ್ನು ಅಧ್ಯಯನ ಮಾಡುವುದರ ಮೂಲಕ ನಮ್ಮ ಜೀವನವನ್ನು ಹಸನಾಗಿಸಿಕೊಳ್ಳಬೇಕು ಎಂದು ತಿಳಿಸಿದರು.
ಪ್ರಮುಖರಾದ ಯೋಗೇಶ್ ಜಾಲಿ, ಉಮೇಶ ಎಂ., ಹನುಮಯ್ಯ ಎಚ್., ಈರಣ್ಣ ಎಚ್, ಶಿರೀಶ, ಎಸ್‌ಡಿಎಂಸಿ ಅಧ್ಯಕ್ಷ ಇದ್ದರು.