ಸುಭದ್ರ ರಾಷ್ಟ್ರನಿರ್ಮಾಣಕ್ಕೆ ಮುಂದಾಗಲಿ

ಕೂಡ್ಲಿಗಿ ಶ್ರೀಮತಿ ಅಂಗಡಿ ವೀರಮ್ಮ ತಿರುಕಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಏಡ್ಸ್-ಅಂಗವಿಕಲರ ದಿನಾಚರಣೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮಕ್ಕೆ ಟಿಎಚ್‌ಒ ಡಾ.ಎಸ್.ಪಿ.ಪ್ರದೀಪ್ ಚಾಲನೆ ನೀಡಿದರು. ಪಪಂ ಅಧ್ಯಕ್ಷ ಕಾವಲಿ ಶಿವಪ್ಪನಾಯಕ, ಜಿಲ್ಲಾ ಎಚ್‌ಐವಿ, ಏಡ್ಸ್ ನಿಯಂತ್ರಣ ಮತ್ತು ನಿರ್ವಾಹಕ ಘಟಕ ಮೇಲ್ವಿಚಾರಕ ಗಿರೀಶ್, ಪ್ರಾಚಾರ್ಯ ಎಸ್.ಷಣ್ಮುಖನ ಗೌಡ, ಕಸಾಪ ತಾಲೂಕು ಅಧ್ಯಕ್ಷ ವೀರೇಶ ಅಂಗಡಿ ಇತರರಿದ್ದರು.

Published on
ಟಿಎಚ್‌ಒ ಡಾ.ಎಸ್.ಪಿ.ಪ್ರದೀಪ್ ಸಲಹೆ
ಕೂಡ್ಲಿಗಿ: ಏಡ್ಸ್ ಮಾರಕ ಕಾಯಿಲೆಯಾಗಿದ್ದು ಯುವ ಜನತೆ ಜಾಗೃತಿ ಹೊಂದಬೇಕು ಎಂದು ಟಿಎಚ್‌ಒ ಡಾ.ಎಸ್. ಪಿ.ಪ್ರದೀಪ್ ಹೇಳಿದರು.
ಪಟ್ಟಣದ ಶ್ರೀಮತಿ ಅಂಗಡಿ ವೀರಮ್ಮ ತಿರುಕಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಸಾರ್ವಜನಿಕ ಆಸ್ಪತ್ರೆ, ಆರೋಹಣ ಸೊಸೈಟಿ ಫಾರ್ ಸೋಶಿಯಲ್ ಡೆವಲಪ್‌ಮೆಂಟ್ ಸಂಸ್ಥೆ ವತಿಯಿಂದ ಏರ್ಪಡಿಸಿದ್ದ ವಿಶ್ವ ಏಡ್ಸ್ ದಿನಾಚರಣೆ, ಅಂಗವಿಕಲರ ದಿನಾಚರಣೆ ಹಾಗೂ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಗುರುವಾರ ಮಾತನಾಡಿದರು.
ಯುವ ಜನತೆ ಸುಭದ್ರ ದೇಶಕ್ಕೆ ಅಡಿಪಾಯವಾಗಿದ್ದು, ಮಾರಕ ಕಾಯಿಲೆಗಳಿಗೆ ತುತ್ತಾಗದೆ ಈ ಬಗ್ಗೆ ಅರಿವು ಹೊಂದುವುದರೊಂದಿಗೆ ಇತರರಿಗೂ ಜಾಗೃತಿ ಮೂಡಿಸಬೇಕು. ಏಡ್ಸ್ ಅಸುರಕ್ಷಿತ ಲೈಂಗಿಕ ಕ್ರಿಯೆಯಿಂದ ಹರಡುತ್ತದೆ. ಆದ್ದರಿಂದ ಯುವಕರು ಸನ್ಮಾರ್ಗದಲ್ಲಿ ನಡೆದು ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.
ಪ್ರತಿಷ್ಠಾ ಸಮಾಜ ಸೇವಾ ಟ್ರಸ್ಟ್ ಅಧ್ಯಕ್ಷೆ ಲಕ್ಷ್ಮೀದೇವಿ, ಐಸಿಟಿಸಿ ಆಪ್ತ ಸಮಾಲೋಚಕ ಕೆ.ಪ್ರಶಾಂತ ಕುಮಾರ್, ಓಬಣ್ಣ, ಪ್ರಾಧ್ಯಾಪಕರಾದ ಅನಿಲ್ ಕುಮಾರ್ ವಿ., ಪ್ರಶಾಂತ್, ತಾತಪ್ಪ, ನಿಂಗಪ್ಪ, ಡಿ.ಜ್ಯೋತಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net