ಎರಡನೇ ಬೆಳೆಗೆ ನೀರು ಸರಬರಾಜು ಮಾಡಲಿ

ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಜಮೀನಿಗೆ ಎರಡನೇ ಬೆಳೆಗೆ ನೀರು ಹರಿಸುವಂತೆ ಆಗ್ರಹಿಸಿ ಸಿರಗುಪ್ಪದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾಜಿ ಶಾಸಕ ಎಂ.ಎಸ್.ಸೋಮಲಿಂಗಪ್ಪ ಮಾತನಾಡಿದರು. ಬಿಜೆಪಿ ತಾಲೂಕು ಅಧ್ಯಕ್ಷ ಕೆ.ಮಲ್ಲಿಕಾರ್ಜುನ, ಮುಖಂಡರಾದ ಚಾಗಿಸುಬ್ಬಯ್ಯ, ಆರ್.ಬಸವಲಿಂಗಪ್ಪ, ಮಾಣಿಕ್ಯ ರೆಡ್ಡಿ, ಆರ್.ಸದಾಶಿವ ಇದ್ದರು.
ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಜಮೀನಿಗೆ ಎರಡನೇ ಬೆಳೆಗೆ ನೀರು ಹರಿಸುವಂತೆ ಆಗ್ರಹಿಸಿ ಸಿರಗುಪ್ಪದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾಜಿ ಶಾಸಕ ಎಂ.ಎಸ್.ಸೋಮಲಿಂಗಪ್ಪ ಮಾತನಾಡಿದರು. ಬಿಜೆಪಿ ತಾಲೂಕು ಅಧ್ಯಕ್ಷ ಕೆ.ಮಲ್ಲಿಕಾರ್ಜುನ, ಮುಖಂಡರಾದ ಚಾಗಿಸುಬ್ಬಯ್ಯ, ಆರ್.ಬಸವಲಿಂಗಪ್ಪ, ಮಾಣಿಕ್ಯ ರೆಡ್ಡಿ, ಆರ್.ಸದಾಶಿವ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ರೈತರ ಪರ ಹೋರಾಟ ನಡೆಸುವ ಸಂಘಟನೆಗಳು ಇಲ್ಲದಂತಾಗಿದೆ.
  • ರೈತರು ಸಾಲದ ಸುಳಿಗೆ ಸಿಲುಕಬೇಕಾಗುತ್ತದೆ
ಸಿರಗುಪ್ಪ: ಸರ್ಕಾರ ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ಜಮೀನಿಗೆ ಎರಡನೇ ಬೆಳೆಗೆ ನೀರು ಪೂರೈಸಬೇಕು. ಇಲ್ಲದಿದ್ದರೆ ಸಿರಗುಪ್ಪ ಬಂದ್ ನಡೆಸಲಾಗುವುದು ಎಂದು ಮಾಜಿ ಶಾಸಕ ಎಂ.ಎಸ್.ಸೋಮಲಿಂಗಪ್ಪ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ನಮ್ಮ ತಾಲೂಕಿನಲ್ಲಿ ರೈತರ ಪರ ಹೋರಾಟ ನಡೆಸುವ ಸಂಘಟನೆಗಳು ಇಲ್ಲದಂತಾಗಿದೆ. ಅಕಾಲಿಕ ಮಳೆಯಿಂದಾಗಿ ಇಳುವರಿ ಕಡಿಮೆಯಾಗಿ ರೈತರು ನಷ್ಟ ಅನುಭವಿಸುವಂತಾಗಿದೆ. ಸರ್ಕಾರ ಪರಿಹಾರ ಒದಗಿಸಬೇಕು. ಮಳೆಯಿಂದಾಗಿ ಇಳುವರಿ ಕುಂಠಿತವಾಗಿ ಬೆಳೆಗೆ ಮಾಡಿದ ಸಾಲ ಹೊರೆಯಾಗಿದೆ. ಬೇಸಿಗೆ ಬೆಳೆಗೆ ನೀರಿಲ್ಲ ಎಂದರೆ ಎಲ್ಲ ವರ್ಗದ ಜನರಿಗೂ ತೊಂದರೆಯಾಗುತ್ತದೆ. ರೈತರು ಸಾಲದ ಸುಳಿಗೆ ಸಿಲುಕಬೇಕಾಗುತ್ತದೆ ಎಂದರು. 
ತುಂಗಭದ್ರಾ ಅಣೆಕಟ್ಟೆಯಲ್ಲಿ ಎರಡನೇ ಬೆಳೆಗೆ ಆಗುವಷ್ಟು ನೀರು ಲಭ್ಯವಿದ್ದರೂ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ. ನೀರಾವರಿ ತಜ್ಞ ಕನ್ನಯ್ಯ ನಾಯ್ಡು ಪ್ರಕಾರ ಎರಡನೇ ಬೆಳೆಗೆ ಮೂರು ತಿಂಗಳವರೆಗೆ ನೀರು ಸರಬರಾಜು ಮಾಡಬಹುದು. ಆದರೆ, ಸಚಿವರು ಕ್ರಸ್ಟ್‌ಗೇಟ್ ಅಳವಡಿಸುವ ಸಲುವಾಗಿ ಎರಡನೇ ಬೆಳೆಗೆ ನೀರು ಬಿಡುವುದಿಲ್ಲ ಎಂದು ಹೇಳುವುದು ಸರಿಯಲ್ಲ ಎಂದರು.
ಅಕ್ಕಿಗಿರಿಣಿ ಮಾಲೀಕರ ಸಂಘ, ಕಿರಾಣಿ ಅಂಗಡಿಗಳ ಮಾಲೀಕರು, ಬಟ್ಟೆ ಅಂಗಡಿಗಳ ಮಾಲೀಕರು, ಬಂಗಾರದ ಅಂಗಡಿ ಮಾಲೀಕರು ಹೋರಾಟಕ್ಕೆ ಬೆಂಬಲ ಸೂಚಿಸಿದರು. ಬಿಜೆಪಿ ತಾಲೂಕು ಅಧ್ಯಕ್ಷ ಕೆ.ಮಲ್ಲಿಕಾರ್ಜುನ, ಮುಖಂಡರಾದ ಚಾಗಿಸುಬ್ಬಯ್ಯ, ಆರ್.ಬಸವಲಿಂಗಪ್ಪ, ಮಾಣಿಕ್ಯರೆಡ್ಡಿ, ಆರ್.ಸದಾಶಿವ, ರೈತರು ಭಾಗವಹಿಸಿದ್ದರು.
03 ಸಿರಗುಪ್ಪ 02 
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net