ಬಲಿಷ್ಠ ರಾಷ್ಟ್ರಗೊಳಿಸಲು ಪ್ರಯತ್ನಿಸೋಣ

ಬಳ್ಳಾರಿಯ ಬಿಮ್ಸ್ ಮೈದಾನದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಸಚಿವ ರಹೀಂ ಖಾನ್ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸಲ್ಲಿಸಿದರು. ಸಂಸದ ಈ.ತುಕಾರಾಮ್, ಮೇಯರ್ ಪಿ.ಗಾದೆಪ್ಪ, ಡಿಸಿ ಕೆ.ನಾಗೇಂದ್ರ ಪ್ರಸಾದ್, ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್, ಎಡಿಸಿ ಮಹಮ್ಮದ್ ಎನ್.ಜುಬೇರ್,  ಐಜಿಪಿ ಡಾ.ಹರ್ಷ, ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ ಇದ್ದರು. =
ಬಳ್ಳಾರಿಯ ಬಿಮ್ಸ್ ಮೈದಾನದಲ್ಲಿ ಗಣರಾಜ್ಯೋತ್ಸವ ಅಂಗವಾಗಿ ಸಚಿವ ರಹೀಂ ಖಾನ್ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸಲ್ಲಿಸಿದರು. ಸಂಸದ ಈ.ತುಕಾರಾಮ್, ಮೇಯರ್ ಪಿ.ಗಾದೆಪ್ಪ, ಡಿಸಿ ಕೆ.ನಾಗೇಂದ್ರ ಪ್ರಸಾದ್, ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್, ಎಡಿಸಿ ಮಹಮ್ಮದ್ ಎನ್.ಜುಬೇರ್, ಐಜಿಪಿ ಡಾ.ಹರ್ಷ, ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ ಇದ್ದರು. =
Published on

ಪ್ರಮುಖ ಮುಖ್ಯಾಂಶಗಳು

  • ಪೌರಾಡಳಿತ
ಬಳ್ಳಾರಿ : ಭಾರತವನ್ನು ಜಗತ್ತಿನ ಅತ್ಯಂತ ಪ್ರಬುದ್ಧ, ಪ್ರಗತಿಪರ, ಭದ್ರ, ಬಲಿಷ್ಠ ರಾಷ್ಟವನ್ನಾಗಿ ರೂಪಿಸಲು ದೇಶಭಕ್ತಿ ಅಳವಡಿಸಿಕೊಳ್ಳುವ ಮೂಲಕ ನಾವೆಲ್ಲಾ ಒಂದಾಗಿ ಪ್ರಯತ್ನಿಸೋಣ ಎಂದು ಪೌರಾಡಳಿತ ಸಚಿವ ರಹೀಂ ಖಾನ್ ಹೇಳಿದರು.
ನಗರದ ಬಿಮ್ಸ್ ಮೈದಾನದ ಆವರಣದಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಪ್ರೀತಿ-ವಿಶ್ವಾಸ ಹಂಚುವ ಮೂಲಕ ಜಿಲ್ಲೆಯನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲು ಎಲ್ಲರೂ ಸಹಕರಿಸಬೇಕು. ಮುಂದಿನ ದಿನಗಳಲ್ಲಿ ರಾಜ್ಯದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ದವಾಗಿದ್ದು, ಜನತೆಯ ಸಹಕಾರದೊಂದಿಗೆ ಪ್ರಗತಿ ಸಾಧಿಸಲಿದೆ ಎಂದರು.
ಮಹಾನ್ ಮಾನವತಾವಾದಿ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಭಾರತದ ಸಂವಿಧಾನದಿಂದ ದೇಶದಲ್ಲಿ ಸರ್ವರಿಗೂ ಸಮಾನತೆ ಲಭಿಸಿದೆ. ಭಾರತವು ವಿವಿಧತೆಯಲ್ಲಿ ಏಕತೆ ಹೊಂದಿದ ರಾಷ್ಟವಾಗಿದೆ. ದೇಶದಲ್ಲಿ ಸ್ವಾತಂತ್ರೃ, ಸಮಾನತೆ, ಭ್ರಾತೃತ್ವ ಭಾವನೆಗಳಿವೆ ಎಂದರೆ ಅದು ಸಂವಿಧಾನ ನೀಡಿರುವ ಕೊಡುಗೆಯಾಗಿದೆ ಎಂದರು.
ಸಂವಿಧಾನದ ಪ್ರಸ್ತಾವನೆಯಲ್ಲಿ ದೇಶದ ಜನಜೀವನದ ಆಶೋತ್ತರಗಳು ಹುದುಗಿವೆ. ಅವುಗಳನ್ನು ಸಾಕಾರಗೊಳಿಸುವ ಪ್ರಯತ್ನದಲ್ಲಿ ನಾವೆಲ್ಲರೂ ತೊಡಗಬೇಕು. ಪ್ರಜಾಪ್ರಭುತ್ವದ ಬೆನ್ನೆಲುಬಾಗಿರುವ ಸ್ಥಳೀಯ ಆಡಳಿತ ವ್ಯವಸ್ಥೆಯನ್ನು ಬಲಪಡಿಸಿ ಬಲಿಷ್ಠ ರಾಷ್ಟ ಕಟ್ಟುವ ಹಾಗೂ ದೇಶದ ಸಮಗ್ರತೆ ಮತ್ತು ಐಕ್ಯತೆ ಕಾಪಾಡುವ, ದೇಶದ ರಕ್ಷಣಾ ಕಾರ್ಯದಲ್ಲಿ ಯೋಧರೊಂದಿಗೆ ಪ್ರತಿಯೊಬ್ಬ ಭಾರತೀಯನು ಕೈಜೋಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಪ್ರತಿಪಾದಿಸಿದರು.
ಕಾರ್ಯಕ್ರಮದಲ್ಲಿ ಪೊಲೀಸ್, ಅರಣ್ಯ ಇಲಾಖೆ, ಗೃಹರಕ್ಷಕ ದಳ ಇಲಾಖೆ ಮತ್ತು ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಂದ ಸಮವಸ್ತದಲ್ಲಿ ಶಿಸ್ತುಬದ್ದ ಪಥಸಂಚಲನ ನಡೆಯಿತು. ಬಳಿಕ ನಾನಾ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಿ, ಗೌರವಿಸಲಾಯಿತು. ಶಾಲಾ ಶಿಕ್ಷಣ ಇಲಾಖೆಯ ವಿವಿಧ ಮಾಧ್ಯಮಿಕ ಮತ್ತು ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ ಸಾಮೂಹಿಕ ನೃತ್ಯ, ದೇಶ ಭಕ್ತಿಗೀತೆ, ವೇಷಧಾರಿ ಒಳಗೊಂಡ ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರ ಮನಸೂರೆಗೊಂಡವು.
ಬಿಮ್ಸ್ ಮೈದಾನದ ಧ್ವಜಾರೋಹಣಕ್ಕೂ ಮುನ್ನ ಇಲ್ಲಿನ ಗವಿಯಪ್ಪ ವೃತ್ತದಲ್ಲಿ ನ 150 ಅಡಿ ಎತ್ತರದ ಧ್ವಜಸ್ತಂಭದ ಧ್ವಜಾರೋಹಣವನ್ನು ಸಚಿವ ರಹೀಂ ಖಾನ್ ನೆರವೇರಿಸಿದರು. ಬಳಿಕ ಡಾ.ರಾಜಕುಮಾರ್ ಉದ್ಯಾನವನದಲ್ಲಿ ಹಾಗೂ ಬಿಮ್ಸ್ ಅವರಣದ ಮುಂಭಾಗದಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net