ಸಾರ್ವಭೌಮತ್ವ ಎತ್ತಿಹಿಡಿಯಲಿ

ಕೂಡ್ಲಿಗಿಯ ಗಾಂಧಿ ಚಿತಾಭಸ್ಮವಿರುವ ಹುತಾತ್ಮರ ಸ್ಮಾರಕಕ್ಕೆ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಪುಷ್ಪ ನಮನ ಸಲ್ಲಿಸಿದರು. ತಹಸೀಲ್ದಾರ್ ವಿ.ಕೆ.ನೇತ್ರಾವತಿ, ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ, ತಾಪಂ ಇಒ ನರಸಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಗುರುಸಿದ್ದನ ಗೌಡ, ಕೆಪಿಸಿಸಿ ಕಾರ್ಯದರ್ಶಿ ಹಿರೇಕುಂಬಳ ಗುಂಟೆ ಉಮೇಶ್ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಸಲಹೆ
  • 80ನೇ ಸ್ವಾತಂತ್ರ್ಯೋತ್ಸವ

ಕೂಡ್ಲಿಗಿ: ಸ್ವಾತಂತ್ರ್ಯ ಎಂದರೆ ಧ್ವಜದ ಜತೆ ದೇಶಕ್ಕಾಗಿ ನಮ್ಮ ಕನಸುಗಳನ್ನು ಹಾರಿಸಬೇಕಿದೆ ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಹೇಳಿದರು.

ಶನಿವಾರ ತಾಲೂಕು ಆಡಳಿತದಿಂದ 80ನೇ ಸ್ವಾತಂತ್ರೊೃೀತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಯುವ ಶಕ್ತಿ ಕೈಯಲ್ಲಿ ಮೊಬೈಲ್ ಬಿಟ್ಟು ದೇಶದ ಸಾರ್ವಭೌಮತ್ವ ಎತ್ತಿಹಿಡಿಯಬೇಕಿದೆ. ಮಾದಕ ವ್ಯಸನ ವಿಮೋಚಿಸಬೇಕು. ದೇಶದ ಸುಭದ್ರತೆಗೆ ತಮ್ಮ ಶಕ್ತಿಯನ್ನು ಸಮರ್ಪಿಸಬೇಕು ಎಂದರು. ವಿವಿಧ ಕ್ಷೇತ್ರಗಳ ಸಾಧಕರು ಹಾಗೂ ಯೋಧರನ್ನು ಸನ್ಮಾನಿಸಲಾಯಿತು.

ತಹಸೀಲ್ದಾರ್ ವಿ.ಕೆ.ನೇತ್ರಾವತಿ, ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ, ತಾಪಂ ಇಒ ನರಸಪ್ಪ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್.ವೆಂಕಟೇಶ, ಕಾವಲಿ ಶಿವಪ್ಪನಾಯಕ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಗುರುಸಿದ್ದನ ಗೌಡ, ಕೆಪಿಸಿಸಿ ಕಾರ್ಯದರ್ಶಿ ಹಿರೇಕುಂಬಳ ಗುಂಟೆ ಉಮೇಶ್, ಪ್ರಮುಖರಾದ ಟಿ.ಜಿ.ಮಲ್ಲಿಕಾರ್ಜುನ ಗೌಡ, ಉದಯಜನ್ನು, ಸಿ.ಬಿ.ಜಯರಾಂ ನಾಯಕ, ಕೋಗಳಿ ಮಂಜುನಾಥ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net