ಸದ್ಯದಲ್ಲೇ ಮತದಾನದ ವಯಸ್ಸನ್ನು ತಲುಪಲಿರುವ ಕಾಲೇಜು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಪ್ರತಿ ಕಾಲೇಜಿನಲ್ಲೂ ಮತದಾರರ ಸಾಕ್ಷರತಾ ಕ್ಲಬ್ ಅನ್ನು ಸ್ಥಾಪಿಸಲಾಗಿದೆ. ರಾಜಕೀಯ ವಿದ್ಯಮಾನಗಳು ಮತ್ತು ಚುನಾವಣಾ ಪ್ರಕ್ರಿಯೆಗಳಿಂದ ಯುವಕರು ದೂರ ಉಳಿಯಬಾರದು, ಬದಲಿಗೆ ಪ್ರಜಾಪ್ರಭುತ್ವದ ಸಕ್ರಿಯ ಪಾಲುದಾರರಾಗಬೇಕು ಎಂಬುದು ಈ ಕ್ಲಬ್‌ನ ಉದ್ದೇಶವಾಗಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ಕುಟುಂಬದ ಯಾವುದೇ ಅರ್ಹ ಸದಸ್ಯರ ಹೆಸರು ಸೂಕ್ತ ದಾಖಲೆಗಳ ಕೊರತೆಯಿಂದಾಗಿ ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳುವ ಜವಾಬ್ದಾರಿ ಹೊಂದಬೇಕು ಎಂದರು.